ನವೆಂಬರ್ 02, 03ಕ್ಕೆ ಮಡಿಕೇರಿಯಲ್ಲಿ ಪತ್ರಕರ್ತರ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ

ಮಡಿಕೇರಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನವೆಂಬರ್ 2 ಹಾಗೂ 3 ರಂದು ಮಡಿಕೇರಿಯಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ ಎಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿವರ್ಷ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ ಆಯೋಜಿಸಿಕೊಂಡು ಬರಲಾಗುತ್ತಿದ್ದು, ಪತ್ರಕರ್ತರನ್ನು ಸಂಘಟಿಸುವ ಪ್ರಮುಖ […]