ಮಡಿಕೇರಿ, ಗೋಣಿಕೊಪ್ಪ ದಸರಾ: ಶಾಂತಿಯುತ ಆಚರಣೆಗೆ ಜಿಲ್ಲಾಡಳಿತ ಮನವಿ

kodagu police

ಮಡಿಕೇರಿ: ಕೊಡಗು ಜಿಲ್ಲೆಯ ಪ್ರಸಿದ್ಧ ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಮಹೋತ್ಸವವನ್ನು ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ, ಅರ್ಥಪೂರ್ಣ ಹಾಗೂ ಶಾಂತಿಯುತವಾಗಿ ಆಚರಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಸಾರ್ವಜನಿಕರು ಹಾಗೂ ದಸರಾ ಸಮಿತಿಗಳಲ್ಲಿ ಮನವಿ ಮಾಡಿದ್ದಾರೆ. ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ದಸರಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತು ದಸರಾ ಸಮಿತಿ ಪ್ರಮುಖರ ಜೊತೆ ನಡೆದ ಸಭೆಯಲ್ಲಿ ಈ ಸೂಚನೆಗಳನ್ನು ನೀಡಲಾಯಿತು. ದಸರಾ ಆಚರಣೆ ವೇಳೆ […]

Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

Power cut kodagu

ಮಡಿಕೇರಿ: ದಸರಾ ಹಬ್ಬದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಅಕ್ಟೋಬರ್ 08 (ಮಂಗಳವಾರ) ರಂದು ಮಡಿಕೇರಿ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.ಹೀಗಾಗಿ, ಅಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ ವಿದ್ಯುತ್ ಕಡಿತಗೊಳ್ಳಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಚೆಸ್ಕಾಂ (CESC) ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಕಾಲೇಜು ರಸ್ತೆ, ಪ್ರಕೃತಿ ಬಡಾವಣೆ, ಜಯನಗರ, ಅಶೋಕ್‍ಪುರ ಜಲಾಶ್ರಯ ಬಡಾವಣೆ, ಸರ್ಕಾರಿ ಆಸ್ಪತ್ರೆ, ಮಂಗಳಾದೇವಿ ನಗರ […]