ಬೇಟೋಳಿ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ವಿರಾಜಪೇಟೆ: ಸಮೀಪದ ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ನವರಾತ್ರಿ ಉತ್ಸವ ಹಾಗೂ ವನದುರ್ಗೆ ದೇವಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ಶ್ರದ್ಧಾ-ಭಕ್ತಿಯಿಂದ ನೆರವೇರಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್ ಹಾಗೂ ವಾಮನ ಮೂರ್ತಿ ಭಟ್ ಅವರ ನೇತೃತ್ವದಲ್ಲಿ ಬೆಳಿಗ್ಗೆಯಿಂದಲೇ ಧಾರ್ಮಿಕ ವಿಧಿವಿಧಾನಗಳು ಆರಂಭವಾದವು. ಮೊದಲಿಗೆ ದೇವಸ್ಥಾನದ ಒಳ ಆವರಣದಲ್ಲಿರುವ ಶ್ರೀ ಮಹಾಗಣಪತಿ, ಶ್ರೀ ಅಯ್ಯಪ್ಪ ಸ್ವಾಮಿ ಹಾಗೂ ಶ್ರೀ ನಾಗ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. […]
ಮಡಿಕೇರಿಯಲ್ಲಿ ಮಕ್ಕಳ ದಸರಾ: ಮಕ್ಕಳ ಸಂತೆ’, ಕಿರು ಮಂಟಪ ಜನಾಕರ್ಷಣೆ

ನಾಡಹಬ್ಬ ಮಡಿಕೇರಿ ದಸರಾ ಜನೋತ್ಸವದ ಸಂಭ್ರಮದ ನಡುವೆ, ಚಿಣ್ಣರಿಗಾಗಿ ಆಯೋಜಿಸಲಾಗಿದ್ದ 13 ನೇ ವರ್ಷದ ‘ಮಕ್ಕಳ ದಸರಾ’ ಕಾರ್ಯಕ್ರಮವು ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನಗರದ ಗಾಂಧಿ ಮೈದಾನದ ‘ಕಲಾ ಸಂಭ್ರಮ’ ವೇದಿಕೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಜರುಗಿತು. ಪುಟಾಣಿಗಳಲ್ಲಿ ಮೂಡಿದ್ದ ಉತ್ಸಾಹ ಹಾಗೂ ಕಲಾ ಪ್ರತಿಭೆಗಳು ಸಾರ್ವಜನಿಕರ ಗಮನ ಸೆಳೆಯಿತು. ಮಕ್ಕಳ ಸಂತೆಯಲ್ಲಿ ಮಕ್ಕಳ ವ್ಯಾಪಾರ, ವ್ಯವಹಾರ ವಹಿವಾಟು ಜೋರಾಗಿಯೇ ನಡೆಯಿತು. ಮಕ್ಕಳ ಸಂತೆ ಮತ್ತು ಅಂಗಡಿ ಸ್ಪರ್ಧೆ: ಪುಟಾಣಿಗಳಿಂದಲೇ ತೆರೆಯಲ್ಪಟ್ಟ ಮಳಿಗೆಗಳು ಹಾಗೂ ಸಂತೆ […]
ರಾಜ್ಯಮಟ್ಟದ ವಿದ್ಯಾರತ್ನ ಪ್ರಶಸ್ತಿ ವಿಜೇತ ಶಿಕ್ಷಕಿ ಎಂ.ಎಸ್. ಅಶ್ವಿನಿಗೆ ಸನ್ಮಾನ

ಪೊನ್ನಂಪೇಟೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ವಿದ್ಯಾರತ್ನ ಪ್ರಶಸ್ತಿಗೆ ಭಾಜನರಾದ ಎಲಿಯಂಗಾಡು ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಎಂ. ಎಸ್. ಅಶ್ವಿನಿ ಅವರನ್ನು ಸನ್ಮಾನಿಸಲಾಯಿತು. ಎಲಿಯಂಗಾಡು ಸರಕಾರಿ ಪ್ರಾಥಮಿಕ ಶಾಲಾ ಅಭಿವೃದ್ಧಿ ಸಮಿತಿ ಮತ್ತು ಎಲಿಯಂಗಾಡು ಯುವಕ ಸಂಘದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಅಶ್ವಿನಿ ಅವರ ಸೇವೆಯನ್ನು ಗುಣಗಾನಗೈದು ಗೌರವಿಸಲಾಯಿತು. ಸ್ಥಳೀಯ ಶಾಲೆಯ ಶಿಕ್ಷಕಿಯೊಬ್ಬರಿಗೆ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿರುವುದು ಇಡೀ ಗ್ರಾಮಕ್ಕೆ ಸಲ್ಲುವ ಗೌರವವಾಗಿದೆ ಎಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ […]