ತ್ರಿನೇತ್ರ ವಾಹನ ಮಾಲೀಕರ ಸಂಘದ ವತಿಯಿಂದ 32ನೇ ವರ್ಷದ ಆಯುಧ ಪೂಜೆ ಕಾರ್ಯಕ್ರಮ

Share this post :

ಮೂರ್ನಾಡು : ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ 32ನೇ ವರ್ಷದ ಆಯುಧ ಪೂಜೆ ಕಾರ್ಯಕ್ರಮ ಅ.01ರಂದು ಸರ್ಕಾರಿ ಪ್ರೌಢಶಾಲೆ ಮೈದಾನ(ನಾಡ್‌ಮಂದ್‌)ದಲ್ಲಿ ನಡೆಯಲಿದೆ.

ಅಂದು ಸಂಜೆ 06 ಗಂಟೆಗೆ ಸಂಘದ ಅಧ್ಯಕ್ಷ ಕರವಂಡ ಸಜನ್‌ ಗಣಪತಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎಸ್.‌ ಕುಶನ್‌ ರೈ, ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಯ ನಿರೀಕ್ಷಕ ಚಂದ್ರಶೇಖರ್‌, ಗ್ರಾಮ ಆಡಳಿತಾಧಿಕಾರಿ ಅಕ್ಷತಾ ಶೆಟ್ಟಿ, ಪಿಡಿಒ ಚಂದ್ರಮೌಳಿ, ವಕೀಲ ಬಿ.ಎ. ಕೃಷ್ಣಮೂರ್ತಿ, ಪಂಚಾಯಿತಿ ಉಪಾಧ್ಯಕ್ಷೆ ಬಿ.ಎಸ್.‌ ರೇಖಾ, ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕಿ ಎಸ್.ಎಂ. ದೇಚಮ್ಮ, ಪಿ.ಎಂ. ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ಬಿ.ಎಸ್.‌ ಪುಷ್ಪಾವತಿ, ಸಮಾಜ ಸೇವಕ ಅವರೆಮಾದಂಡ ಶರಣ್‌ ಪೂಣಚ್ಚ, ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ಗೌರವಾಧ್ಯಕ್ಷ ಎನ್‌.ಕೆ. ಕುಂಞಿರಾಮನ್‌, ಮೂರ್ನಾಡು ವಿದ್ಯಾಸಂಸ್ಥೆ ಅಧ್ಯಕ್ಷ ಚೌರೀರ ಜಗತ್‌ ತಿಮ್ಮಯ್ಯ, ಜ್ಞಾನಜ್ಯೋತಿ ವಿದ್ಯಾಸಂಸ್ಥೆ ಮುಕ್ಕಾಟಿರ ರವಿ ಚೀಯಣ್ಣ, ಮಾರುತಿ ವಿದ್ಯಾಸಂಸ್ಥೆ ಅಧ್ಯಕ್ಷ ಮುಂಡಂಡ ಅಪ್ಪಚ್ಚು, ಮುಸ್ಲಿಂ ಜಮಾಅತ್‌ ಅಧ್ಯಕ್ಷ ಕೆ.ಎ. ಅಬ್ದುಲ್‌ ಮಜೀದ್‌ ಮತ್ತಿತರರು ಭಾಗವಹಿಸಲಿದ್ದಾರೆ.

coorg buzz
coorg buzz