ಹೆಗ್ಗಳ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರೋತ್ಸವ ಸಂಭ್ರಮ

Share this post :

ವೀರಾಜಪೇಟೆ : ಹೆಗ್ಗಳ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲೆಯ ಮುಖ್ಯ ಶಿಕ್ಷಕಿ ಕಮಲಮ್ಮ ನೆರವೇರಿಸಿದರು. ಧ್ವಜವಂದನೆಯನ್ನು ಕಾಫಿ ಬೆಳೆಗಾರರಾದ ಕೋಡಿರ ಟಿ. ಗಣಪತಿ ನೆರವೇರಿಸಿದರು. ಶಾಲೆಯ ಸಹ ಶಿಕ್ಷಕಿ ಕಮರುನ್ನಿಸ, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರುಗಳು, ಶಾಲೆಯ ಸಿಬ್ಬಂದಿ, ಪೋಷಕರು, ಸಾರ್ವಜನಿಕರು ಪಾಲ್ಗೊಂಡಿದ್ದರು. ಸ್ವಾತಂತ್ರ್ಯೋತ್ಸವ ಅಂಗವಾಗಿ ಪುಟಾಣಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

coorg buzz
coorg buzz