Fact check: ಕೊಡಗಿನಲ್ಲಿ ಸಿಎಂ ಕಾರಿನ ಮೇಲೆ ಮೊಟ್ಟೆ ಎಸೆದವನು ಈತ ಅಲ್ಲ: ಶಂಭು ಕೊಲೆ ಸೆರೆಗಾಗಿ ಪೊಲೀಸರಿಂದ 2 ತಂಡ ರಚನೆ

Sampath

Share this post :

coorg buzz

2022ರಲ್ಲಿ ಸಿಎಂ ಸಿದ್ದರಾಮಯ್ಯ ಕೊಡಗು ಭೂಕುಸಿತ ಅವಲೋಕನಕ್ಕೆಂದು ಭೇಟಿ ನೀಡಿದ್ದ ವೇಳೆ ಸಿದ್ದರಾಮಯ್ಯ ಕಾರಿನ ಮೇಲೆ ವ್ಯಕ್ತಿಯೊಬ್ಬ ಮೊಟ್ಟೆ ಎಸೆದಿದ್ದ ಪ್ರಕರಣ ನಡೆದಿತ್ತು. ಈ ಪ್ರಕರಣದ ಆರೋಪಿಯ ಶವ ಹಾಸನದಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಆದ್ರೆ ಈ ವರದಿ ತಪ್ಪಾಗಿದ್ದು, ಈ ಸಂಪತ್‌ (Sampath) ಬೇರೆ. ಅದ್ರೆ ಒಂದೆ ಹೆಸರು ಆಗಿರುವುದರಿಂದ ಗೊಂದಲ ಉಂಟಾಗಿದ್ದು ಎನ್ನಲಾಗಿದೆ.

ಸಂಪತ್‌ ಅಲಿಯಾಸ್‌ ಶಂಭು ಅವರ ಮೃತದೇಹ ಕೆಲ ದಿನಗಳ ಹಿಂದೆ ಪತ್ತೆಯಾಗಿದೆ. ಈ ಪ್ರಕರಣದ ಬಗ್ಗೆ ಆರೋಪಿಗಳ ಸೆರೆಗೆ ತೀವ್ರ ಕಾರ್ಯಾಚರಣೆ ಮಾಡುತ್ತಿರುವ ಪೊಲೀಸರು 2 ತಂಡಗಳನ್ನು ರಚನೆ ಮಾಡಿ ತನಿಖೆ ನಡೆಸುತ್ತಿದ್ದಾರೆ. ಕೊಡಗಿನ ಸೋಮವಾರಪೇಟೆ ತಾಲ್ಲೂಕಿನಲ್ಲಿ ಕಳೆದ 5 ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಡಗು- ಹಾಸನ ಗಡಿಭಾಗದ ಸಕಲೇಶಪುರ ತಾಲ್ಲೂಕಿನ ಹೊಸಳ್ಳಿ ಮಠದ ನಿರ್ಜನ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪತ್ತೆಯಾಗಿತ್ತು.

ಸೋಮವಾರಪೇಟೆ ಕಕ್ಕೆಹೊಳೆ ಜಂಕ್ಷನ್ ನಿವಾಸಿ ದಾಮೋದರ ನಾಯರ್ ಅವರ ದ್ವಿತೀಯ ಪುತ್ರ ಸಂಪತ್ ಅಲಿಯಾಸ್ ಶಂಭು (45) ಕೊಲೆಯಾದವರು. ಇವರ ಕಾರು ಮೇ.10ರಂದು ಸಕಲೇಶಪುರ ತಾಲ್ಲೂಕು ಯಸಳೂರು ಹೋಬಳಿ ಮಾಗೇರಿಯ ಸಮೀಪದ ಕಲ್ಲಹಳ್ಳಿ ಗ್ರಾಮದಲ್ಲಿ ಕಂಡು ಬಂದಿದೆ. ಈ ಕೊಲೆಯ ರಹಸ್ಯ ಇನ್ನೂ ಬಯಲಾಗಿಲ್ಲ, ಇದನ್ನು ಭೇದಿಸಲು ಪೊಲೀಸರು 2 ತಂಡಗಳನ್ನು ರಚನೆ ಮಾಡಿ ತನಿಖೆ ನಡೆಸುತ್ತಿದ್ದಾರೆ.