ಕೊಡಗು ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರನ್ನು ನಿರಂತರವಾಗಿ ಕಡೆಗಣಿಸುತ್ತಾ, ಪಕ್ಷದ ಯಾವುದೇ ಕಾರ್ಯಕ್ರಮಗಳನ್ನು ಯುವ ಕಾಂಗ್ರೆಸ್ ಮುಖಂಡರು ಮತ್ತು ಪದಾಧಿಕಾರಿಗಳಿಗೆ ತಿಳಿಸುತ್ತಿಲ್ಲ. ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಕೇವಲ ರಾಜಕೀಯವಾಗಿ ಮಾತ್ರ ಬಳಸುತ್ತಿದ್ದಾರೆ. ಕೊಡಗಿನಲ್ಲಿ ಕೆಲವೊಂದು ಹಿರಿಯ ಕಾಂಗ್ರೆಸ್ ಮುಖಂಡರು ಯುವ ಕಾಂಗ್ರೆಸ್ ಮುಖಂಡರನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಯುವ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಅನೂಪ್ ಕುಮಾರ್ (Anup Kumar) ಸುಂಟ್ಟಿಕೊಪ್ಪ ಮಾಹಿತಿ ನೀಡಿದ್ದಾರೆ.
