ಕೊಡಗಿನಲ್ಲಿ ಕ್ಷೀಣಿಸಿದ ಮಳೆ ಅಬ್ಬರ: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ

Kodagu

Share this post :

coorg buzz

ಮಡಿಕೇರಿ:-ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 3.89 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.81 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ (Rainfall) 742.06 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 335.10 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 10.08 ಮಿ.ಮೀ. ಕಳೆದ ವರ್ಷ ಇದೇ ದಿನ 0.40 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1074.13 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 464.70 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 4.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 756.80 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 268.50 ಮಿ.ಮೀ. ಮಳೆಯಾಗಿತ್ತು.

ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4.32 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.75 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 689.56 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 334.90 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 5.05 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.40 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 651.04 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 253.90 ಮಿ.ಮೀ. ಮಳೆಯಾಗಿತ್ತು.

ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 538.74 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 353.50 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 10, ಸಂಪಾಜೆ 12.50, ಭಾಗಮಂಡಲ 17.80, ಶ್ರೀಮಂಗಲ 6.20, ಪೊನ್ನಂಪೇಟೆ 5, ಬಾಳೆಲೆ 6.08, ಸೋಮವಾರಪೇಟೆ 3.20, ಶನಿವಾರಸಂತೆ 2, ಶಾಂತಳ್ಳಿ 15 ಮಿ.ಮೀ.ಮಳೆಯಾಗಿದೆ.