ಕೂಡಲೇ ಅರ್ಜಿ ಸಲ್ಲಿಸಿ: ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

Guest Teacher

Share this post :

coorg buzz

ಮಡಿಕೇರಿ:-ಕೊಡಗು ಜಿಲ್ಲೆಯಲ್ಲಿರುವ ಪರಿಶಿಷ್ಟ ಪಂಗಡದ ವಾಲ್ಮೀಕಿ ಆಶ್ರಮ ಶಾಲೆಗಳಲ್ಲಿರುವ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಲಿಕೆಗಾಗಿ ಗೌರವಧನದ ಆಧಾರದ ಮೇಲೆ 08 ಅತಿಥಿ ಶಿಕ್ಷಕರ (Guest Teacher) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್, 10 ಕೊನೆಯ ದಿನವಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿರುವಂತೆ ಗೌರವಧನ ಮಾಹೆಯಾನ ರೂ.10 ಸಾವಿರ ನಿಗಧಿಪಡಿಸಿದೆ. ಇಂಗ್ಲೀಷ್ ಐಚ್ಚಿಕ ವಿಷಯದಲ್ಲಿ ಪದವಿ ಮತ್ತು ಬಿ.ಎಡ್. ಪೂರ್ಣಗೊಳಿಸಿದ ಅಭ್ಯರ್ಥಿಗಳಾಗಿರಬೇಕು.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಮಂಡಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅರ್ಜಿಯನ್ನು ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿರವರ ಕಚೇರಿ, ಹೊಸ ಜಿಲ್ಲಾ ಪಂಚಾಯತ್ ಕಟ್ಟಡ ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 08272-200500 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಅವರು ತಿಳಿಸಿದ್ದಾರೆ.