ಆರ್ಸಿಬಿ (RCB) ವಿಜಯೋತ್ಸವ ಕಾರ್ಯಕ್ರಮದ ವೇಳೆ ಬೆಂಗಳೂರಿನ (Bengaluru) ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಬಳಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಜನ ಸಾವನ್ನಪ್ಪಿದ್ದಾರೆ. ಈ ಕಾಲ್ತುಳಿತ ಪ್ರಕರಣವನ್ನು ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ನೀಡಿ, ಆದೇಶ ಹೊರಡಸಿದೆ. ಈ ಪ್ರಕರಣದ ವಿಚಾರಣಾಧಿಕಾರಿಯಾಗಿ ಜಿಲ್ಲಾಧಿಕಾರಿ ಜಗದೀಶ್.ಜಿ ಅವರನ್ನು ಸರ್ಕಾರ ನೇಮಕ ಮಾಡಿದೆ.
ಕಾಲ್ತುಳಿತ ದುರಂತದಲ್ಲಿ 11 ಜನರ ಸಾವಿಗೆ ಸಂಬಂಧಿಸಿದ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. ಘಟನೆ ಬಗ್ಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿದ್ದು, ಮಧ್ಯಾಹ್ನ 2.30 ಕ್ಕೆ ವಿಚಾರಣೆ ನಿಗದಿಪಡಿಸಿದೆ.