ನಟಿ ರಚಿತಾ ರಾಮ್ ಅವರು ‘ಸಂಜು ವೆಡ್ಸ್ ಗೀತಾ 2’ (Sanju Weds Geetha 2) ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಈ ಸಿನಿಮಾಗೆ ನಾಗಶೇಖರ್ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾ ಬಿಡುಗಡೆ ಆಯಿತು. ಆದರೆ ರಚಿತಾ ರಾಮ್ ವಿರುದ್ಧ ಚಿತ್ರತಂಡ ತಿರುಗಿ ಬಿದ್ದಿದೆ. ಇದರ ನಿರ್ಮಾಪಕ ಛಲವಾದಿ ಕುಮಾರ್ ರಚಿತಾ ರಾಮ್ (Rachitha ram) ವಿರುದ್ದ ದೂರು ನೀಡಿದ್ದಾರೆ, ನಟಿಯ ವಿರುದ್ಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಲಾಗಿದೆ.
‘ಚಿತ್ರತಂಡಕ್ಕೆ ರಚಿತಾ ರಾಮ್ ದ್ರೋಹ ಬಗೆದಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ನಾವು ಇಂಥ ಕಲಾವಿದರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ನಮ್ಮ ಸಿನಿಮಾ ಪ್ರಚಾರಕ್ಕೆ ಒಂಚೂರು ಸಹಕಾರ ಕೊಟ್ಟಿಲ್ಲ”.
ರಾಕ್ಲೈನ್ ವೆಂಕಟೇಶ್ . ಶಿವಣ್ಣ, ಉಪೇಂದ್ರ, ಸುದೀಪ್ ಸಪೋರ್ಟ್ ಕೊಟ್ಟಿದ್ದಾರೆ. ಆದರೆ, ನಟಿ ರಚಿತಾ ರಾಮ್ ಚಿತ್ರದ ಪ್ರಚಾರಕ್ಕೆ ಬಂದಿಲ್ಲ. ನಾವು ರಚಿತಾ ರಾಮ್ ಅವರಿಗೆ ಸಂಬಳ ಕಡಿಮೆ ಕೊಟ್ಟಿಲ್ಲ. ಆದರೂ ನಟಿ ರಚಿತಾ ರಾಮ್ ಚಿತ್ರದ ಪ್ರಚಾರಕ್ಕೆ ಬಂದಿಲ್ಲ’ ಎಂದು ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ತಂಡದವರು ಆರೋಪ ಮಾಡಿದ್ದಾರೆ.