ಪೊನ್ನಂಪೇಟೆಯಲ್ಲಿ ಮಾದಕ ವಸ್ತು ಸರಬರಾಜು – 1.79 ಕೆಜಿ ಗಾಂಜಾ ಸಹಿತ ಆರೋಪಿ ಅಂದರ್..!

Share this post :

ಗೋಣಿಕೊಪ್ಪ : ಮಾದಕ ವಸ್ತು MDMA ಮತ್ತು ಗಾಂಜಾ ಮಾರಾಟ ಮತ್ತು ಸರಬರಾಜು ಮಾಡುತ್ತಿದ್ದ ಆರೋಪಿಯೊಬ್ಬನ್ನು ಪೊನ್ನಂಪೇಟೆ ಪೊಲೀಸರು ಬಂಧಿಸಿದ್ದಾರೆ.

ಗೋಣಿಕೊಪ್ಪದ ಗುರುದತ್ (30) ಬಂಧಿತ ವ್ಯಕ್ತಿ. ಬಂಧಿತನಿಂದ 4 ಗ್ರಾಂ MDMA ಹಾಗೂ 1 ಕೆ.ಜಿ. 79 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಮಂಗಳವಾರ ದಿನ ಈತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಸಿಕ್ಕ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು. ವಿರಾಜಪೇಟೆ ಉಪವಿಭಾಗ ಡಿವೈಎಸ್ಪಿ ಮಹೇಶ್ ಕುಮಾರ್, ಗೋಣಿಕೊಪ್ಪ ಪ್ರಭಾರ ವೃತ್ತ ನಿರೀಕ್ಷಕ ಬಿ.ಎಸ್. ಶಿವರುದ್ರ, ಪೊನ್ನಂಪೇಟೆ ಸಬ್ ಇನ್ಸ್‌ಪೆಕ್ಟರ್ ಜಿ. ನವೀನ್ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಮಾದಕ ವಸ್ತು ಸಾಗಾಟಕ್ಕೆ ಬಳಸಿದ್ದ ಬ್ರೀಜಾ ಹಾಗೂ ಒಂದು ಆಲ್ಟೊ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಯನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿರುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಐನ್ನು ಜಿಲ್ಲಾ ಎಸ್ಪಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ.

coorg buzz
coorg buzz