ಮಡಿಕೇರಿ : ಪ್ರಸಕ್ತ(೨೦೨೫-೨೬) ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪಿಯುಸಿ. ಮತ್ತು ಐಟಿಐ ಹಾಗೂ ಡಿಪ್ಲೊಮೊ ಕೋರ್ಸ್ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ಜೂನ್ ೩೦ ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ https://shp.karnataka.gov.in/bcwd
ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-೧, ಎಸ್.ಸಿ. ಮತ್ತು ಎಸ್.ಟಿ ರೂ.೨.೫೦ ಲಕ್ಷ, ಪ್ರವರ್ಗ-೨ಎ, ೨ಬಿ, ೩ಎ, ೩ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.೧.೦೦ ಲಕ್ಷ ಆಗಿರುತ್ತದೆ. ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ https://shp.karnataka.gov.in/bcwd ಅನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿಗಳವರ ಕಚೇರಿ ಮತ್ತು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಮೊಬೈಲ್ ಸಂಖ್ಯೆ ಜಿಲ್ಲಾ ಕಚೇರಿ ಮಡಿಕೇರಿ ದೂ.ಸಂ. ೦೮೨೭೨-೨೯೫೬೨೮, ಮಡಿಕೇರಿ ತಾಲ್ಲೂಕು ಕಚೇರಿ ಮೊ.ಸಂಖ್ಯೆ ೮೭೬೨೪೭೬೭೯೦, ವಿರಾಜಪೇಟೆ ತಾಲ್ಲೂಕು ಕಚೇರಿ ಮೊ.ಸಂಖ್ಯೆ ೯೪೪೮೨೦೫೯೧೯ ಮತ್ತು ಸೋಮವಾರಪೇಟೆ ತಾಲ್ಲೂಕು ಕಚೇರಿ ಮೊ.ಸಂಖ್ಯೆ. ೯೪೮೧೭೭೨೧೪೩ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
