ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ವನ್ಯ ಪ್ರಾಣಿ-ಮಾನವ ಸಂಘರ್ಷ ಪ್ರತಿಧ್ವನಿ : ಉಸ್ತುವಾರಿ ಸಚಿವ ಬೋಸರಾಜ್ ಹೇಳಿದ್ದೇನು..?

Share this post :

ಮಡಿಕೇರಿ : ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳ ಹಾಗೂ ಮಾನವ ಸಂಘರ್ಷ ನಿರಂತರವಾಗಿ ಮುಂದುವರಿದಿದ್ದು, ಅದನ್ನು ತಡೆಯುವ ನಿಟ್ಟಿನಲ್ಲಿ ಅರಣ್ಯ ಅಧಿಕಾರಿಗಳು ಅಗತ್ಯ ಕಾರ್ಯಯೋಜನೆ ರೂಪಿಸಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.‌ ಬೋಸರಾಜು ನಿರ್ದೇಶನ ನೀಡಿದ್ದಾರೆ.
ನಗರದ ಜಿ.ಪಂ. ಸಭಾಂಗಣದಲ್ಲಿ ಶುಕ್ರವಾರ ನಡೆದ ೨೦೨೫-೨೬ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (೨೦ ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಡು ಪ್ರಾಣಿಗಳ ಹಾವಳಿ ನಿರಂತರವಾಗಿ ಇದ್ದು, ಇವುಗಳನ್ನು ತಡೆಯಲು ಅರಣ್ಯ ಇಲಾಖೆ ಅಧಿಕಾರಿಗಳು ಪರಿಣಾಮಕಾರಿ ಕಾರ್ಯಕ್ರಮ ರೂಪಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಅರಣ್ಯ ಸಚಿವರ ಜೊತೆ ಮಾತನಾಡಿದ ಎ.ಎಸ್.ಪೊನ್ನಣ್ಣ, ಕೊಡಗು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ವನ್ಯಪ್ರಾಣಿಗಳ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕಿದೆ. ಈ ಸಂಬಂಧ ಸಚಿವರು ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು.
ಶಾಸಕ ಡಾ. ಮಂತರ್‌ ಗೌಡ, ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿರ್ದೇಶಕ ಎ.ಮಂಜು, ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ. ಪ್ರಸಾದ್, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಜಿ.ಪಂ.ಉಪ ಕಾರ್ಯದರ್ಶಿ ಅಬ್ದುಲ್ ನಬಿ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

coorg buzz
coorg buzz