ಮಡಿಕೇರಿ : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆಸಲ್ಪಡುತ್ತಿರುವ ಸಾಂತ್ವನ ಮಹಿಳಾ ಸಹಾಯವಾಣಿ ಕೊಡಗಿನಾದ್ಯಂತ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾಗಿ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ ೫೫೦೨ ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, ೫೪೭೮ ಪ್ರಕರಣಗಳು ಇತ್ಯರ್ಥಗೊಂಡಿರುತ್ತದೆ.
೨೦೨೫-೨೬ನೇ ಆರ್ಥಿಕ ಸಾಲಿನಲ್ಲಿ ೮೩ ಪ್ರಕರಣಗಳು ದಾಖಲಾಗಿ ೬೫ ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ ಉಳಿದ ೨೪ ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ. ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ರೂ ೫೦,೦೦೦ ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ ಫಲಾನುಭವಿಗಳಿಗೆ ೨೦೨೫-೨೬ ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ.
ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷ ಪ್ರಕಾಶ್ ಕೆ.ಎಸ್., ಪ್ರಧಾನ ಕಾರ್ಯದರ್ಶಿ ನಮಿತ ಆರ್. ರೈ ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: ೯೮೮೦೯೮೫೯೩೯ ಅನ್ನು ಸಂಪರ್ಕಿಸಬಹುದು.
