ಕುಶಾಲನಗರ : ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಕೊಡಗಿನ ಎಚ್.ಎಸ್. ಚೇತನ್ ಆಯ್ಕೆಯಾಗಿದ್ದಾರೆ.
ಆಯ್ಕೆಯಾದ ಬಳಿಕ ಜಿಲ್ಲೆಗೆ ಆಗಮಿಸಿದ ಅವರನ್ನು ನೂರಾರು ಬೆಂಬಲಿಗರು, ಬಂಧುಗಳು, ಸಹೋದ್ಯೋಗಿಗಳು ಅದ್ಧೂರಿಯಾಗಿ ಬರಮಾಡಿಕೊಂಡರು. ಕುಶಾಲನಗರಕ್ಕೆ ಆಗಮಿಸಿದ ವೇಳೆ ಅಲ್ಲಿ ಸೇರಿದ್ದ ನೂರಾರು ಮಂದಿ ಹೂವಿನ ಹಾರ ಹಾಕಿ ಅಭಿನಂದಿಸಿ ಸ್ವಾಗತಿಸಿದರು. ಕುಶಾಲನಗರ ಬಳಿಯ ಹೇರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿರುವ ಚೇತನ್ ಜಿಲ್ಲೆಯಲ್ಲಿ ಸಂಘಟನೆಯನ್ನು ಬಲಗೊಳಿಸುವಲ್ಲಿ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದವರು. ಇದೀಗ ರಾಜ್ಯಮಟ್ಟದ ಜವಾಬ್ದಾರಿ ಸಿಕ್ಕ ಹಿನ್ನೆಲೆಯಲ್ಲಿ ಅವರ ಆಪ್ತರು, ಬೆಂಗಲಿಗರು ಸಂಭ್ರಮಾಚರಿಸಿದರು.





