ಅಧಿಕಾರಿಗಳು ತಳಮಟ್ಟದಲ್ಲಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು : ಶಾಸಕ ಎ.ಎಸ್.ಪೊನ್ನಣ್ಣ

Share this post :

ಮಡಿಕೇರಿ : ಅರಣ್ಯಕ್ಕೆ ಸಂಬಂಧಿಸಿದಂತೆ ಹಲವು ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಮುಂದಾಗಬೇಕು. ಆ ನಿಟ್ಟಿನಲ್ಲಿ ತಳಮಟ್ಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ.
ಸಂಪಾಜೆ, ಚೆಂಬು, ಪೆರಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಅರಣ್ಯ ಅಧಿಕಾರಿಗಳು ಹಾಗೂ ಸಾರ್ವಜನಿಕರ ಜೊತೆ ಚೆಂಬು ಗ್ರಾ.ಪಂ.ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕರು ಮಾತನಾಡಿದರು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಿದಲ್ಲಿ ಎಷ್ಟೋ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಬಹುದು. ಆ ನಿಟ್ಟಿನಲ್ಲಿ ಗಮನಹರಿಸಬೇಕು. ಯಾರಿಗೂ ಸಹ ತೊಂದರೆಯಾಗದಂತೆ ಕಾಳಜಿ ವಹಿಸಬೇಕು ಎಂದು ಸೂಚಿಸಿದರು.
ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಧರ್ಮಜ ಉತ್ತಪ್ಪ, ಪ್ರಮುಖರಾದ ಸಂಕೇತ್ ಪೂವಯ್ಯ, ಉಪ ಅರಣ್ಯ ಸಂರಕ್ಷಾಣಧಿಕಾರಿ ಅಭಿಷೇಕ್, ಸಾರ್ವಜನಿಕರು ಇದ್ದರು.

coorg buzz
coorg buzz