ಕುಶಾಲಗರ : ವಿಶ್ವ ಹಿಂದು ಪರಿಷತ್ ಕುಶಾಲನಗರ ಅಧ್ಯಕ್ಷರಾಗಿ ಉದ್ಯಮಿ ವಸಂತ್ ರೈ ಆಯ್ಕೆಯಾಗಿದ್ದಾರೆ. ಕುಶಾಲನಗರದ ವಾಸವಿ ಸಭಾಂಗಣದಲ್ಲಿ ನಡೆದ ವಿಎಚ್‌ಪಿ ಮುಖಂಡರ ಸಭೆಯಲ್ಲಿ ನೂತನ ನಗರಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ಸಂಘಟನೆಯ ರಾಜ್ಯ ಕಾರ್ಯದರ್ಶಿ ಶರಣ್ ಪಂಪ್ವೆಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಂಘಟನೆಯ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು.
ನೂತನವಾಗಿ ಆಯ್ಕೆಯಾದ ವಸಂತ್ ರೈ ಅವರು ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಹಾಗೂ ಯುವ ಬಂಟ್ಸ್ ಅಸೋಸಿಯೇಷನ್‌ನಲ್ಲಿ ಪ್ರಮುಖ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ.
