ಕಾವೇರಿ ಕಾಲೇಜಿನ ದೈಹಿಕ ನಿರ್ದೇಶಕ ತಮ್ಮಯ್ಯಗೆ ಅಧ್ಯಾಪಕ ಭೂಷಣ ಪ್ರಶಸ್ತಿ

Cauvery College

Share this post :

coorg buzz

ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ದೈಹಿಕ ನಿರ್ದೇಶಕರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಬೇಗೂರು ಕೆಚೆಟ್ಟಿರ .ಎಸ್. ತಮ್ಮಯ್ಯನವರು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ(ರಿ) ಮಂಗಳೂರು ವಿಭಾಗ ವತಿಯಿಂದ ನೀಡಲಾಗುವ ಅಧ್ಯಾಪಕ ಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ ಮೂಡಬಿದಿರೆ ಆಳ್ವಾಸ್ ಕ್ಯಾಂಪನ್ ನಲ್ಲಿ ನಡೆದ ಪ್ರೇರಣ ದಿವಸ್ ಕಾರ್ಯಕ್ರಮದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ ಚಂದ್ ಗೊಹ್ಲೋಟ್ ರವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಕ್ರೀಡಾ ವಿಭಾಗದಲ್ಲಿ ಇವರ ಮಾರ್ಗದರ್ಶನದಲ್ಲಿ ವಿಧ್ಯಾರ್ಥಿಗಳು ಮಾಡಿದ ಸಾಧನೆಯ ಹಿನ್ನಲೆ ಅತ್ಯುತ್ತಮ ದೈಹಿಕ ನಿರ್ದೇಶಕ ಎಂಬ ನೆಲೆಯಲ್ಲಿ ಈ ಪ್ರಶಸ್ತಿಗೆ ಭಾಜನರಾಗಿದ್ದು ಈ ಹಿಂದೆ ಮೈಸೂರಿನ ಸೆಂಟ್ ಜೋಸೆಪ್ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಹಾಕಿ ಕ್ರೀಡಾಕೂಟದಲ್ಲಿ ಇವರ ಮಾರ್ಗದರ್ಶನದ ಎ ಹಾಗೂ ಬಿ ತಂಡಗಳು ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಪೈನಲ್ ಹಂತಕ್ಕೆ ತಲುಪಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆದಿತ್ತು. ಪ್ರಾಂಶುಪಾಲ ಬೆನೆಡಿಕ್ಟ್ ಆರ್ ಸಲ್ದಾನ ಹಾಗೂ ಐ.ಕ್ಯೂ.ಎ.ಸಿ ಸಂಚಾಲಕಿ ಪ್ರಿಯ ಮುದ್ದಪ್ಪ ಕಾಲೇಜಿನ ಪರವಾಗಿ ತಮ್ಮಯ್ಯ ರವರನ್ನು ಅಭಿನಂದಿಸಿದ್ದಾರೆ. ತಮ್ಮಯ್ಯ ಗೋಣಿಕೊಪ್ಪಲುವಿನ ಬೇಗೂರು ದಿವಂಗತ ಕೆಚೆಟ್ಟಿರ.ಟಿ ಸೋಮಯ್ಯ ಹಾಗೂ ಕೆ.ಸಿ.ಪ್ರೇಮಯವರ ಪುತ್ರ.