ಕುಶಾಲನಗರ : ನ್ಯಾಯಬೆಲೆ ಅಂಗಡಿಯಲ್ಲಿ ಸಿಕ್ಕ ಅಕ್ಕಿಯನ್ನ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಪ್ರಕರಣ ಕುಶಾಲನಗರದಲ್ಲಿ (Kushalnagar) ಬೆಳಕಿಗೆ ಬಂದಿದೆ. ಪೂರಕ ಮಾಹಿತಿ ಹಿನ್ನೆಲೆಯಲ್ಲಿ ಬೆಳಗ್ಗೆ ಕಾರ್ಯಾಚರಣೆ ಕೈಗೊಂಡ ತಾಲೂಕು ಆಹಾರ ನಿರೀಕ್ಷಕಿ ಎಂ.ಎಸ್. ಸ್ವಾಮಿ ನೇತೃತ್ವದ ತಂಡ ಅಕ್ಕಿ ಮಾರಾಟ ದಂಧೆಯನ್ನು ಬಯಲಿಗೆಳೆದಿದೆ. ವ್ಯಕ್ತಿಯೊಬ್ಬ ಮನೆ ಮನೆಗೆ ತೆರಳಿ ಅಕ್ಕಿ ಸಂಗ್ರಹಿಸಿ ಅದನ್ನು ಬೇರೆಡೆ ಕೊಂಡೊಯ್ದು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಇಂದು ಸುಂದರ ನಗರದಲ್ಲಿ ಮನೆಗಳಿಂದ ಅಕ್ಕಿ ಸಂಗ್ರಹಿಸುವ ವೇಳೆ ದಾಳಿ ಮಾಡಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಹೀಗೆ ಸಂಗ್ರಹಿಸಿದ ಅಕ್ಕಿಯನ್ನು ಅಂಗಡಿ, ಅಕ್ಕಿ ಗಿರಣಿಗಳಿಗೆ ಮಾರಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಇದರ ಹಿಂದೆ ಯಾರಿದ್ದಾರೆ?. ಯಾರ ಸಹಕಾರದೊಂದಿಗೆ ಇಂಥ ದಂಧೆ ನಡೆಯುತ್ತಿದೆ ಎಂಬುದನ್ನು ಅಧಿಕಾರಿಗಳು ಬಯಲಿಗೆಳೆಯಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ
