ಮರಗೋಡು : ಮರಗೋಡು ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ ಮತ್ತು ನಿಔರತ್ತ ಕಾರ್ಯಕರ್ತೆಗೆ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ ನಡೆಯಿತು.
ಮುಖ್ಯ ಅತಿಥಿಯಾಗಿ ಪ್ರಭಾರ ಸಾಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು ಎದೆ ಹಾಲಿನ ಮಹತ್ವದ ಬಗ್ಗೆ ವಿವರಿಸಿದರು. ಇದೇ ಸಂದರ್ಭ ಕತ್ತಲೆಕಾಡು ಅಂಗನವಾಡಿ ಕೇಂದ್ರದಲ್ಲಿ 31 ವರ್ಷ ಕಾಲ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಿ.ಕೆ. ಸುಶೀಲಾ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಮರಗೋಡು ವೃತ್ತಕ್ಕೆ ಸೇರಿದ ಅಂಗನವಾಡಿಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಈ ಸಂದರ್ಭ ಇದ್ದರು.
ಕಡಗದಾಳು ಅಂಗನವಾಡಿ ಕಾರ್ಯಕರ್ತೆ ಕೆ.ಆರ್. ಅನಿಲ ಸ್ವಾಗತಿಸಿದರು. ಮರಗೋಡು ಅಂಗನವಾಡಿ ಕಾರ್ಯಕರ್ತೆ ಅಕ್ಕಮ್ಮ ವಂದಿಸಿದರು.




