ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್‌ ಆಕ್ರೋಶ – ಅನಿರ್ಧಿಷ್ಟಾವಧಿಗೆ ಪ್ರತಿಭಟನೆ ಮುಂದೂಡಿಕೆ..!

Share this post :

ಬೆಂಗಳೂರು : ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಆರಂಭಿಸಿದ್ದ ಮುಷ್ಕರವನ್ನ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪಿಐಎಲ್ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯಿತು. ಈ ವೇಳೆ ನೌಕರರ ನಡೆಗೆ ಹೈಕೋರ್ಟ್ ಆಕ್ರೋಶ ವ್ಯಕ್ತಪರಿಸಿ, ನೌಕರರ ಸಂಘಟನೆಗಳಿಗೆ ತರಾಟೆ ತೆಗೆದುಕೊಂಡಿತು. ಮುಷ್ಕರದ ಬಗ್ಗೆ ಮಾಹಿತಿ ನೀಡಬೇಕು. ಇಲ್ಲದಿದ್ದರೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸುವುದಾಗಿ ಎಚ್ಚರಿಸಿತು.
ಹೈಕೋರ್ಟ್‌ನಲ್ಲಿ ತರಾಟೆಗೊಳಗಾಗುತ್ತಿದ್ದಂತೆ ಸುದ್ದಿಗೊಷ್ಠಿ ನಡೆಸಿದ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್, ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ಮುಂದೂಡಿಕೆಯಾಗಿದೆ. ಎಲ್ಲಾ ನೌಕರರು ಈ ಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ್ದಾರೆ.

coorg buzz
coorg buzz