ಗೋಣಿಕೊಪ್ಪ : ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನದಿಂದ ಕಾಡಾನೆಗಳ ದಾಳಿ ಮಿತಿಮೀರಿದೆ. ಚಲಿಸುತ್ತಿದ್ದ ಆಟೋ ಮೇಲೆ ಕಾಡಾನೆ ದಾಳಿ ಮಾಡಿದ್ದು, ಪ್ರಯಾಣಿಕರೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಂಜಿಲಗೆರೆಯಲ್ಲಿ ನಡೆದಿದೆ.
ಆಟೋ ರಿಕ್ಷಾ ರಸ್ತೆಯಲ್ಲಿ ತೆರಳುತ್ತಿದ್ದ ಸಂದರ್ಭ ಪಕ್ಕದ ತೋಟದಿಂದ ಏಕಾಏಕಿ ಬಂದ ಕಾಡಾನೆ ದಾಳಿ ಮಾಡಿದೆ. ಆಟೋ ರಿಕ್ಷಾ ಚಾಲಕ ಅಪಾಯದಿಂದ ಪಾರಾಗಿದ್ದರೆ, ರಿಕ್ಷಾದಲ್ಲಿದ್ದ ಪ್ರಯಾಣಿಕ ಪ್ರದೀಪ್ ಎಂಬವರು ಗಾಯಗೊಂಡಿದ್ದಾರೆ. ಅವರನ್ನು ಸಿದ್ದಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.



