ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆಯಾಗಿದ್ದು, ಸಹಕಾರ ಸಚಿವ ಕೆ.ಎನ್. ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮನೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಅವರು ರಾಜೀನಾಮೆ ನೀಡಿದ್ದಾರೆಂದು ತಿಳಿದು ಬಂದಿದೆ.
ಕೆಲವು ದಿನದ ಹಿಂದೆ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಮತಗಳ್ಳತನ ಆರೋಪ ಮಾಡಿದ್ದರು. ಇದಕ್ಕೆ ವಿರುದ್ಧವಾಗಿ ರಾಜಣ್ಣ ತಮ್ಮ ಹೇಳಿಕೆ ನೀಡಿದ್ದರು. ಇದು ಹೈಕಮಾಂಡ್ ನಾಯಕರನ್ನು ಕೆರಳಿಸಿತ್ತು. ತಕ್ಷಣ ಅವರಿಂದ ರಾಜೀನಾಮೆ ಪಡೆಯವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರಿಷ್ಠರು ಸೂಚಿದ್ದರು. ಅದರ ಮುಂದುವರೆದ ಭಾಗವಾಗಿ ಸಚಿವ ರಾಜಣ್ಣ ರಾಜೀನಾಮೆ ನೀಡಿದ್ದಾರೆ.



