ಸ್ವಾತಂತ್ರ್ಯೋತ್ಸವ ಅಂಗವಾಗಿ ಸುನ್ನಿ ಯುವಜನ ಸಂಘದ ವತಿಯಿಂದ ವೀರಾಜಪೇಟೆ ಆಸ್ಪತ್ರೆ ಆವರಣದಲ್ಲಿ ಸ್ವಚ್ಛತಾ ಕಾರ್ಯ

Share this post :

ವೀರಾಜಪೇಟೆ : ಸುನ್ನಿ ಯುವಜನ ಸಂಘ(ಎಸ್‌ವೈಎಸ್‌) ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವೀರಾಜಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ತೆರವು ಮಾಡಿದರು. ಆವರಣದಲ್ಲಿದ್ದ ತ್ಯಾಜ್ಯಗಳನ್ನು ತೆರವುಗೊಳಿಸಿ ಪರಿಸರ ಶುಚಿತ್ವದ ಅರಿವು ಮೂಡಿಸಿದರು. ಈ ಕಾರ್ಯದಲ್ಲಿ ಎಸ್‌ವೈಎಸ್‌ ವೀರಾಜಪೇಟೆ ವೃತ್ತದ ಸದಸ್ಯರು ಪಾಲ್ಗೊಂಡಿದ್ದರು.
ಈ ವೇಳೆ ಮಾತನಾಡಿದ ಸಂಘಟನೆ ರಾಜ್ಯ ಸಮಿತಿ ಸದಸ್ಯ ಮುಖಂಡ ಅಹಮ್ಮದ್‌ ಮದನಿ, ನಮ್ಮ ಸುತ್ತಲಿನ ವಾತಾವರಣ ಸ್ವಚ್ಛತೆಯಿಂದ ಕೂಡಿರಬೇಕು. ಎಸ್‌ವೈಎಸ್‌ ವತಿಯಿಂದ ವಿವಿಧ ಸಂದರ್ಭದಲ್ಲಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬರುತ್ತಿದ್ದೇವೆ ಎಂದು ತಿಳಿಸಿದರು. ಪ್ರಮುಖರಾದ ಯಾಕೂಬ್‌, ಕಾರ್ಯಕರ್ತರಾದ ಶಫೀಕ್‌, ಅಜೀಜ್‌ ಮುಂತಾದವರಿದ್ದರು.

coorg buzz
coorg buzz