ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ ದಿಬ್ಬಕ್ಕೆ ಡಿಕ್ಕಿಯಾದ KSRTC ಬಸ್‌..!

Share this post :

ಮಾದಾಪುರ : ಕೆಎಸ್‌ಆರ್‌ಟಿಸಿ ಬಸ್‌ ಒಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕಕ್ಕೆ ಸರಿದ ಘಟನೆ ಮುಟ್ಲುವಿನಲ್ಲಿ ನಡೆದಿದೆ. ಸೋಮವಾರಪೇಟೆಯಿಂದ ಸೂರ್ಲಬ್ಬಿ ಮಾರ್ಗವಾಗಿ ತೆರಳುತ್ತಿದ್ದ ಬಸ್‌ ಇಲ್ಲಿನ ಸುಬ್ರಹ್ಮಣ್ಯ ದೇವಾಲಯ ಬಳಿ ನಿಯಂತ್ರಣ ಕಳೆದುಕೊಂಡಿದೆ. ರಸ್ತೆ ಬದಿಗೆ ಸರಿದು ಅಲ್ಲೇ ಇದ್ದ ಸಣ್ಣ ದಿಬ್ಬಕ್ಕೆ ಡಿಕ್ಕಿಯಾಗಿ ನಿಂತಿದೆ. ಬಸ್‌ನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

 

coorg buzz
coorg buzz