ಕೊಡಗು (Kodagu) ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಬೆರಳಚ್ಚುಗಾರರು(ಕಂಪ್ಯೂಟರ್ ಆಪರೇಟರ್), ವಾಹನ ಚಾಲಕರು ಮತ್ತು ಡಿ ಗ್ರೂಪ್ ಹುದ್ದೆಗೆ ಸೇವೆಯನ್ನು ಬಾಹ್ಯ ಮೂಲಕ ಪಡೆಯಲು ಇ-ಪ್ರೊಕ್ಯೂರ್ ಮೆಂಟ್ ಮುಖಾಂತರ ಟೆಂಡರ್ ಆಹ್ವಾನಿಸಲಾಗಿದೆ. ಸಾರ್ವಜನಿಕ ಹಾಗೂ ಆಡಳಿತ ಹಿತದೃಷ್ಟಿಯಿಂದ ಕೊಡಗು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರರು, ವಾಹನ ಚಾಲಕರು, ಗ್ರೂಪ್ ‘ಡಿ’ ಮತ್ತು ಸ್ವೀಪರ್ ಹುದ್ದೆಗಳ ಪೈಕಿ ಕೆಲವು ಹುದ್ದೆಗಳಿಗೆ ನೌಕರರನ್ನು ಹೊರಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ವರೆಗೆ ಅಥವಾ ಸರ್ಕಾರದಿಂದ ಹುದ್ದೆಗಳು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡುವ ತನಕ ಮಾತ್ರ ಸೇವೆಯನ್ನು ಮಾನವ ಸಂಪನ್ಮೂಲ ಗುತ್ತಿಗೆದಾರರಿಂದ ಪಡೆಯಲು ಇ-ಪ್ರೊಕ್ಯೂರ್‍ಮೆಂಟ್ ಮುಖಾಂತರ ಅಲ್ಪಾವಧಿ ಟೆಂಡರ್ ಆಹ್ವಾನಿಸಲಾಗಿದೆ.
ಆಸಕ್ತ ಟೆಂಡರ್‍ದಾರರು ಟೆಂಡರ್‍ನ ಪೂರ್ಣ ವಿವರಗಳನ್ನು ಕರ್ನಾಟಕ ಸರ್ಕಾರದ ಇ-ಪ್ರೊಕ್ಯೂರ್‍ಮೆಂಟ್ ಪೋರ್ಟಲ್ ವೆಬ್‍ಸೈಟ್‍ನಲ್ಲಿ (http://www.eproc.karnataka.gov.in) ಮಾತ್ರ ಪಡೆಯಬಹುದು. ಹೆಚ್ಚಿನ ವಿವರಗಳಿಗೆ ಈ ಕಚೇರಿಯ ದೂ.ಸಂ.08272-225811 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.



