ಸುಳ್ಯ : ಪಿಜಿಯೊಂದರಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಅಭಿ(20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಕೊಡಗು ಜಿಲ್ಲೆಯ ವೀರಾಜಪೇಟೆ ಕಲ್ಲುಬಾಣೆ ನಿವಾಸಿ ವಿಜು ಹಾಗೂ ಸುಮತಿ ದಂಪತಿಯ ಪುತ್ರ ಅಭಿ ಸುಳ್ಯದ ಕೆವಿಜಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಪಿಜಿಯಲ್ಲಿದ್ದುಕೊಂಡು ಕಾಲೇಜಿಗೆ ಹೋಗುತ್ತಿದ್ದು, ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.



