ಕೊಡಗಿನಲ್ಲಿ ಮದ್ಯ ಮಾರಾಟ ನಿಷೇಧ: ಯಾವಾಗ? ಎಲ್ಲೆಲ್ಲಿ?

kodagu liquor ban

Share this post :

ಮಡಿಕೇರಿ ನಗರದಲ್ಲಿ ಹಾಗೂ ವಿರಾಜಪೇಟೆ ನಗರದಲ್ಲಿ ಗೌರಿ-ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ದತ್ತವಾದ ಅಧಿಕಾರದಂತೆ ಆಗಸ್ಟ್, 29 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮಡಿಕೇರಿ ನಗರದ ವ್ಯಾಪ್ತಿಯಲ್ಲಿ, ಸೆಪ್ಟೆಂಬರ್, 06 ರಂದು ಬೆಳಗ್ಗೆ 6 ಗಂಟೆಯಿಂದ ಸೆಪ್ಟೆಂಬರ್, 07 ರ ಬೆಳಗ್ಗೆ 10 ಗಂಟೆಯವರೆಗೆ ವಿರಾಜಪೇಟೆ ನಗರ ಹಾಗೂ ಅದರ ಸುತ್ತಮುತ್ತಲಿನ ಸುಮಾರು 10 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೋಟೆಲ್ ಮತ್ತು ಕ್ಲಬ್‍ಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.

coorg buzz
coorg buzz