ಕುಶಾಲನಗರ : ದೊಡ್ಡ ಅಳುವಾರದಲ್ಲಿರುವ ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಸೆ. 11ರಂದು ʼವಿಷಪೂರಿತ ಹಾವುಗಳು : ಗುರುತಿಸುವಿಕೆ ಮತ್ತು ಮುನ್ನೆಚ್ಚರಿಕೆ ಕ್ರಮಗಳುʼ ವಿಷಯದ ಬಗ್ಗೆ ಒಂದು ದಿನದ ತರಬೇತಿ ಆಯೋಜಿಸಲಾಗಿದೆ.
ತರಬೇತಿಯಲ್ಲಿ ವಿಷಪೂರಿತ ಹಾವುಗಳ ಬಗ್ಗೆ ಮಾಹಿತಿ, ಹಾವುಗಳನ್ನು ಹಿಡಿಯುವ ಸಲಕರಣೆ, ಹಾವು ಬರದಂತೆ ತಡೆಯುವುದು, ಅಹಾರ, ಪ್ರಥಮ ಚಿಕಿತ್ಸೆ, ಅಪನಂಬಿಕೆಗಳು, ರೈತಸ್ನೇಹಿ ಹಾವುಗಳು, ಇತ್ಯಾದಿ ವಿಷಯದ ಬಗ್ಗೆ ವಿಷಯ ತಜ್ಞರಿಂದ ಮಾಹಿತಿ ನೀಡಲಾಗುವುದು. ಆಸಕ್ತ ರೈತರು ಹಾಗೂ ಸಾರ್ವಜನಿಕರು ಮೊಬೈಲ್ ಸಂಖ್ಯೆ : 8880557766, 9902442243ಕ್ಕೆ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು. ಸೀಮಿತ ಅವಕಾಶಗಳಿರುವುದರಿಂದ ಮೊದಲು ನೋಂದಾಯಿಸಿದವರಿಗೆ ಆದ್ಯತೆ ನೀಡಲಾಗುವುದು.



