ಮಡಿಕೇರಿ : ಗೋಣಿಕೊಪ್ಪ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸಲು ಸಭೆಯು ಸೆಪ್ಟೆಂಬರ್ ೧೧ ರಂದು ಬೆಳಗ್ಗೆ ೧೧.೩೦ ಗಂಟೆಯಿಂದ ೧೨.೩೦ ಗಂಟೆವರೆಗೆ ಗೋಣಿಕೊಪ್ಪ ಉಪವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ವಿರಾಜಪೇಟೆ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆ ಸೆಪ್ಟೆಂಬರ್ ೧೧ ರಂದು ಮಧ್ಯಾಹ್ನ ೦೨.೩೦ ಗಂಟೆಯಿಂದ ೦೩.೩೦ ಗಂಟೆವರೆಗೆ ವಿರಾಜಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸೋಮವಾರಪೇಟೆ ಉಪ ವಿಭಾಗ ವ್ಯಾಪ್ತಿಯ ಸಭೆಯು ಸೆಪ್ಟೆಂಬರ್ ೧೨ ರಂದು ಬೆಳಗ್ಗೆ ೧೧.೩೦ ಗಂಟೆಯಿಂದ ೧೨.೩೦ ಗಂಟೆವರೆಗೆ ಸೋಮವಾರಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ.
ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ಸಭೆ ಸೆಪ್ಟೆಂಬರ್ ೧೨ ರಂದು ಮಧ್ಯಾಹ್ನ ೦೨.೩೦ ಗಂಟೆಯಿಂದ ೦೩.೩೦ ಗಂಟೆವರೆಗೆ ಕುಶಾಲನಗರ ಉಪ ವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ.
ಆಯಾ ಉಪವಿಭಾಗ ವ್ಯಾಪ್ತಿಯ ಸಾರ್ವಜನಿಕರು/ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳಿದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಸಭೆಗೆ ಹಾಜರಾಗುವಂತೆ ಚಾವಿಸನಿನಿ ಮಡಿಕೇರಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.



