ಹಾವುಗಳನ್ನು ಹಿಡಿದು ಫೋಟೋ ಶೂಟ್ ಮಾಡಿದರೆ ಕೇಸ್‌ ಬೀಳುತ್ತೆ ಎಚ್ಚರ..!

Share this post :

ಬೆಂಗಳೂರು : ಇತ್ತೀಚಿನ ದಿನದಲ್ಲಿ ಉರಗ ರಕ್ಷಣೆ ಹೆಸರಿನಲ್ಲಿ ಹಾವುಗಳಿಗೆ ಹಿಂಸೆ ನೀಡುತ್ತಿರುವುದು ಹಾಗೂ ಅವುಗಳನ್ನು ಬಳಸಿಕೊಂಡು ಫೋಟೋಶೂಟ್‌ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆ ಕೊನೆಗೂ ಎಚ್ಚೆತ್ತಿದೆ.
ಹಾವು ಹಾಗೂ ಅವುಗಳ ಮೊಟ್ಟೆಗಳನ್ನು ಅಕ್ರಮವಾಗಿ ದಾಸ್ತಾನು ಮಾಡುವುದು, ವಿಷ ತೆಗೆಯುವುದು, ಅನುಮತಿ ಇಲ್ಲದೆ ಅರಣ್ಯ ಪ್ರವೇಶಿಸಿದ ಸಂಶೋಧನೆ ಮಾಡುವವರ ವಿರುದ್ಧ ದೂರು ದಾಖಲಿಸಿ ಕ್ರಮ ಕೈಗೊಳ್ಳಲು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ಕೊಟ್ಟಿದ್ದಾರೆ.
ರಾಜ್ಯದ ಮಲೆನಾಡು ಭಾಗದಲ್ಲಿ ಅನಧಿಕೃತವಾಗಿ ಕಾಳಿಂಗ ಸರ್ಪಗಳನ್ನು ಸೆರೆ ಹಿಡಿದು ಅಮಾನವೀಯವಾಗಿ ಫೋಟೋ ಶೂಟ್ ಮಾಡಲು ಅವಕಾಶ ಮಾಡಿ ಕೊಡುತ್ತಿದ್ದ ಜಾಲವನ್ನು ಭೇದಿಸಿ ಪ್ರಕರಣ ದಾಖಲಿಸಲಾಗಿದೆ. ಸಂಶೋಧನೆಯ ಹೆಸರಿಯಲ್ಲಿ ವಾಣಿಜ್ಯಾತ್ಮಕವಾಗಿ ಹಾವುಗಳನ್ನು ಬಳಸುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಈ ವಿಚಾರವನ್ನೂ ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ.
15-09-2025 ರಂದು ಶಿವಮೊಗ್ಗದ ಇಂದಿರಾನಗರ ಮತ್ತೂರು ರಸ್ತೆಯಲ್ಲಿ ಕೆಲವರು ಎರಡು ಹೆಬ್ಬಾವುಗಳನ್ನು ಹಿಡಿದು ಅವುಗಳ ಬಾಯಿಗೆ ಪ್ಲಾಸ್ಟರ್ ಹಾಕಿ ಹಿಂಸೆ ನೀಡುತ್ತಾ ಫೋಟೋ, ವಿಡಿಯೋ ಶೂಟ್ ಮಾಡಿ ವಿಕೃತಿ ಮೆರೆದಿದ್ದಾರೆ. ಇಲಾಖೆ ಸಿಬ್ಬಂದಿ ಅವುಗಳನ್ನು ವಶಕ್ಕೆ ಪಡೆದಿದ್ದರು.

coorg buzz
coorg buzz