ವೀರಾಜಪೇಟೆ ಸೆಂಟ್ ಆನ್ಸ್ ಕಾಲೇಜಿನಲ್ಲಿ ಎಂ.ಕಾಂ ಪ್ರವೇಶಾತಿ ಆರಂಭ

Share this post :

ವೀರಾಜಪೇಟೆ : ವೀರಾಜಪೇಟೆಯ ಸೆಂಟ್ ಆನ್ಸ್ ಕಾಲೇಜಿನಲ್ಲಿ ಎಂ.ಕಾಂ. ಸ್ನಾತಕೋತ್ತರ ವಿಭಾಗಕ್ಕೆ 2025 -26ನೇ ಸಾಲಿಗೆ ಪ್ರವೇಶಾತಿ ಆರಂಭವಾಗಿದೆ. ನುರಿತ ಉಪನ್ಯಾಸಕರು, ಸುಸಜ್ಜಿತ ಕೊಠಡಿ, ಐಸಿಟಿ ತರಗತಿ, ಗ್ರಂಥಾಲಯ ವ್ಯವಸ್ಥೆ, ವೈಫೈ, ಕೆ ಸೆಟ್ ಹಾಗೂ ನೆಟ್ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದೆ. ಜೊತೆಗೆ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣಗಳಲ್ಲಿ ವಿಚಾರ ಮಂಡನೆ, ಇಂಡಸ್ಟ್ರಿಯಲ್ ವಿಸಿಟ್, ಹಾಗೂ ಇಂಟರ್ನ್‌ಶಿಪ್‌, ಬೋಧನಾ ಕೌಶಲ್ಯ ತರಬೇತಿ, ಸೆಮಿನಾರ್, ಫೆಸ್ಟ್‌ಗಳಲ್ಲಿ ಪಾಲ್ಗೊಳ್ಳುವಿಕೆ, ಹಾಗೂ ಪ್ರಾಯೋಗಿಕ ತರಬೇತಿಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.
ಈ ಹಿಂದಿನ ಸಾಲಿನ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳಲ್ಲಿ ಅತ್ಯುನ್ನತ ಶ್ರೇಣಿಯನ್ನು ಪಡೆಯುವುದರ ಜೊತೆಗೆ ಪ್ರತಿ ಸೆಮಿಸ್ಟರ್‌ನಲ್ಲೂ ಶೇಕಡ 100% ಫಲಿತಾಂಶ ದಾಖಲಾಗಿರುತ್ತದೆ. ಶಿಕ್ಷಣ ಮಾತ್ರವಲ್ಲದೆ ಉದ್ಯೋಗ ಘಟಕದ ಮೂಲಕ ಕ್ಯಾಂಪಸ್ ಸೆಲೆಕ್ಷನ್, ಸಾಂಸ್ಕೃತಿಕ ಚಟುವಟಿಕೆ, ಶೈಕ್ಷಣಿಕ ಪ್ರವಾಸ, ಹೀಗೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ.
ಜೊತೆಗೆ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಕೇಂದ್ರಿತ ಕಾರ್ಯಕ್ರಮಗಳನ್ನು ಪ್ರತಿ ವರ್ಷ ಹಮ್ಮಿಕೊಳ್ಳುತ್ತಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ವಿರಾಜಪೇಟೆಯಲ್ಲಿಯೇ ಕಲಿಯುವ ಅವಕಾಶವಿದ್ದು, ಈ ಶೈಕ್ಷಣಿಕ ಸಾಲಿಗೆ ಪ್ರಥಮ ಎಂ.ಕಾಂ ತರಗತಿಗೆ ಪ್ರವೇಶಾತಿ ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಕಾಲೇಜಿನ ವೇಳೆಯಲ್ಲಿ ಆಗಮಿಸಿ ಪ್ರವೇಶಾತಿ ಪಡೆದುಕೊಳ್ಳಬೇಕಾಗಿ ಕಾಲೇಜಿನ ವ್ಯವಸ್ಥಾಪಕ ರೆ.ಫಾ. ಮದಲೈ ಮುತ್ತು ಹಾಗೂ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

coorg buzz
coorg buzz