ಶನಿವಾರಸಂತೆ : ಲೋಕಾಯುಕ್ತ ಬಲೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರು ಬಿದ್ದಿದ್ದಾರೆ. ಸೋಮವಾರಪೇಟೆ ತಾಲೂಕಿನ ಹಂಡ್ಲಿ ಗ್ರಾಪಂ ಅಧ್ಯಕ್ಷೆ ಸುಧಾ ಹಿರೇಶ್ ಎಂಬವರೇ ಲಂಚ ಸ್ವೀಕಾರ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಜನಪ್ರತಿನಿಧಿ.
ಕಾಮಗಾರಿಯೊಂದರ ಸಂಬಂಧ ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಸಂಬಂಧ ಗುತ್ತಿಗೆದಾರ ಭರತ್ ಎಂಬವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಕಾರ್ಯಾಚರಣೆ ನಡೆಸಿದ ಲೋಕಾಯುಕ್ತರು 25 ಸಾವಿರ ರೂ. ಲಂಚ ಪಡೆಯುವ ವೇಳೆ ಅಧ್ಯಕ್ಷೆಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ ಲೋಕೇಶ್, ವೀಣಾ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು. ಸದ್ಯ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.



