ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ – ಸರ್ಕಾರದ ವಿರುದ್ಧ ಸಂಸದ ಯದುವೀರ್‌ ಆಕ್ರೋಶ

Share this post :

ಮೈಸೂರು : ಇತ್ತೀಚಿನ ದಿನದಲ್ಲಿ ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕೊಡಗು-ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ಹಬ್ಬದ ವಾತಾವರಣ ಈಗಲೂ ಇದೆ. ಆದರೆ ಇಲ್ಲಿ ನಡೆದ ಘಟನೆಗಳು ಕಾನೂನು ಸುವ್ಯವಸ್ಥೆ ಹೇಗಿದೆ ಅನ್ನೋದನ್ನ ತೋರಿಸುತ್ತಿದೆ. ಹಿಂದೆ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಯಿತು. 340 ಕೋಟಿ ರೂಪಾಯಿಯ ಡ್ರಗ್ಸ್ ಪತ್ತೆಯಾಯಿತು. ಇದನ್ನ ಮಹಾರಾಷ್ಟ್ರದ ಪೊಲೀಸರು ಪತ್ತೆ ಮಾಡಬೇಕಾಯಿತು. ಇದೀಗ ಅರಮನೆ ಬಳಿಯಲ್ಲೇ ಕೊಲೆ ಆಗಿದೆ. ನಿನ್ನೆ ಚಿಕ್ಕ ಮಗು ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಲಾಗಿದೆ. ಈ ರೀತಿ ಹಿಂದೆಂದೂ ಆಗಿರಲಿಲ್ಲ ಎಂದರು.
ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ನಗರದ ಹೃದಯ ಭಾಗದಲ್ಲೇ ಇಂತಹ ಘಟನೆಗಳು ನಡೆದರೆ ಹೇಗೆ. ಕಿಡಿಗೇಡಿಗಳಿಗೆ ಯಾವುದೇ ರೀತಿಯ ಭಯ ಇಲ್ಲ. ಸಿಎಂ ಸಿದ್ದರಾಮಯ್ಯ ಚುನಾವಣೆಯಲ್ಲಿ ಇದು ನನ್ನ ತವರು ಅಂತಾರೆ. ಇಂತಹ ಘಟನೆಗಳನ್ನು ಆಗದಂತೆ ತಡೆಯಲು ಆಗುತ್ತಿಲ್ಲ ಎಂದು ಟೀಕಿಸಿದರು.

coorg buzz
coorg buzz