ಮಡಿಕೇರಿ : ವೀರಾಜಪೇಟೆ ವಕೀಲರ ಸಂಘದ ಅಧ್ಯಕ್ಷ ಸಿ.ಕೆ. ಪೂವಣ್ಣ ಮೇಲೆ ಕೆಲವು ವ್ಯಕ್ತಿಗಳು ಹಲ್ಲೆಗೆ ಯತ್ನಿಸಿದ್ದನ್ನ ಖಂಡಿಸಿ ಜಿಲ್ಲಾದ್ಯಂತ ವಕೀಲರು ಪ್ರತಿಭಟನೆ ನಡೆಸಿದ್ದಾರೆ.
ವಿವಿಧ ನ್ಯಾಯಾಲಯಗಳಲ್ಲಿ ಕಲಾಪ ಬಹಿಷ್ಕರಿಸಿದ ವಕೀಲರು ಘಟನೆಗೆ ತಮ್ಮ ಖಂಡನೆಯನ್ನು ವ್ಯಕ್ತಪಡಿಸಿ ಕೃತ್ಯಕ್ಕೆ ಯತ್ನಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ನಿನ್ನೆ ಪೂವಣ್ಣ ಅವರ ಕಚೇರಿಗೆ ನುಗ್ಗಿದ ಕೆಲವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದರು. ಈ ಸಂಬಂಧ ವೀರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇಂದು ಮಡಿಕೇರಿ ನ್ಯಾಯಾಲಯದ ವಕೀಲರು ಬಾರ್ ಅಸೋಸಿಯೇಷನ್ ಮುಂದಾಳತ್ವದಲ್ಲಿ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ವ್ಯಕ್ತಪಡಿಸಿದರು. ವಕೀಲರ ಸಂಘದ ಮುಖಂಡರು, ಸದಸ್ಯರು ಈ ಸಂದರ್ಭ ಹಾಜರಿದ್ದರು.



