ಕೊಡಗು ವಿವಿ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರಗೆ ʼಆನರ್‌ ಆಫ್‌ ಅಶೋಕʼ ಪ್ರಶಸ್ತಿ

Share this post :

ಕುಶಾಲನಗರ : ಕೊಡಗು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರರವರಿಗೆ ನವದೆಹಲಿಯ ಇಂಡಿಯಾ ಹ್ಯಾಬಿಟೆಟ್ ಸೆಂಟರ್ ವತಿಯಿಂದ ಕೊಡಮಾಡುವ ಪ್ರತಿಷ್ಠಿತ “ಆನರ್ ಆಫ್ ಅಶೋಕ ಪ್ರಶಸ್ತಿ 2025” ನೀಡಿ ಗೌರವಿಸಲಾಗಿದೆ.
ನ್ಯಾಯಾಂಗ, ಪೊಲೀಸ್, ಸಾರ್ವಜನಿಕ-ಶೈಕ್ಷಣಿಕ ಆಡಳಿತ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಶ್ಲಾಘನೀಯ ಶ್ರೇಷ್ಠತೆಯನ್ನು ಪ್ರದರ್ಶಿಸಿದ ನೈಪುಣ್ಯ ಅಧಿಕಾರಿಗಳು, ಸೈನಿಕರು, ಆಡಳಿತಗಾರರು ಮತ್ತು ಶಿಕ್ಷಣ ತಜ್ಞರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಶೈಕ್ಷಣಿಕ ಕ್ಷೇತ್ರದಲ್ಲಿನ ಸಾಧನೆಗಾಗಿ ಅಶೋಕ ಸಂಗಪ್ಪ ಆಲೂರ ಈ ಬಾರಿ ಭಾಜನರಾಗಿದ್ದಾರೆ.
ಮಾಜಿ ರಾಜ್ಯಪಾಲ ಕಲ್ರಾಜ್‌ ಮಿಶ್ರಾ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಮುಖ್ಯ ನ್ಯಾಯಮೂರ್ತಿ ವಿಜೇಂದರ್ ಜೈನ್ ವಹಿಸಿದ್ದರು. ಅನೇಕ ಗಣ್ಯರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

coorg buzz
coorg buzz