ಮಡಿಕೇರಿ : ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಕ್ಟೋಬರ್ 17ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ನಾಳೆ ಮಧ್ಯಾಹ್ನ ಕಾವೇರಿ ಉಗಮಸ್ಥಳ ತಲಕಾವೇರಿಯಲ್ಲಿ ನಡೆಯಲಿರುವ ತೀರ್ಥೋದ್ಭವ ವೀಕ್ಷಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಪರಾಹ್ನ 12.30ಕ್ಕೆ ಭಾಗಮಂಡಲಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿ, ನಂತರ ತಲಕಾವೇರಿಗೆ ತೆರಳಲಿದ್ದಾರೆ. ಪೂಜಾ ಕಾರ್ಯ ಹಾಗೂ ತೀರ್ಥೋದ್ಭವ ವೀಕ್ಷಣೆ ಬಳಿಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆಂದು ಡಿಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.



