Cristiano Ronaldo: ಕ್ರಿಸ್ಟಿಯಾನೋ ರೊನಾಲ್ಡೊ ಭಾರತ ಭೇಟಿ ರದ್ದು: ಕಾರಣವೇನು?

Share this post :

AFC Champions League -2 ಫುಟ್ಬಾಲ್ ಟೂರ್ನಿಯಲ್ಲಿ ಮಂಗಳವಾರ AFC ಗೋವಾ ಫುಟ್ಬಾಲ್ ತಂಡದ ವಿರುದ್ದ ಸೌದಿ ಅರೇಬಿಯಾದ ಅಲ್-ನಸ್ರ್ ಕ್ಲಬ್ ಪರ ಆಡಬೇಕಿದ್ದ ಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ(Cristiano Ronaldo) ಅವರ ಭಾರತ ಭೇಟಿ ರದ್ದುಗೊಂಡಿದೆ. ಸೋಮವಾರ ಭಾರತಕ್ಕೆ ಆಗಮಿಸಿದ ಅಲ್ ನಸ್ರ್(Al Nassr) ತಂಡದಲ್ಲಿ ರೊನಾಲ್ಡ್ ಇಲ್ಲ.

ರೊನಾಲ್ಡ್ ತಮ್ಮ ಸೌದಿ ಕ್ಲಬ್ ತಂಡದೊಂದಿಗೆ ಭಾರತಕ್ಕೆ ಪ್ರವಾಸ ಕೈಗೊಳ್ಳಬೇಕಿತ್ತು.ಆದರೆ ಒಪ್ಪಂದದ ಪ್ರಕಾರ ಪಂದ್ಯ ಆಯ್ಕೆ ಮಾಡಿ ಕೊಳ್ಳುವ ಅಧಿಕಾರ ರೊನಾಲ್ಡೊ ಅವರಿಗಿರುವ ಕಾರಣ, ಅವರು ಗೋವಾ ವಿರುದ್ಧ ಪಂದ್ಯ ಆಡಲು ಒಪ್ಪಿಕೊಂಡಿಲ್ಲ ಎನ್ನಲಾಗಿದೆ. ಮು೦ದಿನ ವರ್ಷ ನಡೆಯಲಿರುವ ಫಿಫಾ ವಿಶ್ವಕಪ್ ಮೇಲೆ ಕಣ್ಣಿಟ್ಟಿರುವ 40 ವರ್ಷದ ರೊನಾಲ್ಡ್ ಫಿಟ್ನೆಸ್‌ಗೆ ಹೆಚ್ಚಿನ ಒತ್ತು ಕೊಡುತ್ತಿದ್ದು ಕಾರ್ಯದೊತ್ತಡ ತಗ್ಗಿಸುವ ನಿಟ್ಟಿನಲ್ಲಿ ಕೆಲ ಪಂದ್ಯಗಳಿಂದ ದೂರ ಉಳಿಯುತ್ತಿದ್ದಾರೆ.

ಪೋರ್ಚುಗಲ್ ಫುಟ್ಬಾಲ್ ದಂತಕಥೆ ಕ್ರಿಸ್ಟಿಯಾನೋ ರೊನಾಲ್ಡೊ ಅವರನ್ನು ಹತ್ತಿರದಿಂದ ಕಣ್ತುಂಬಿಕೊಳ್ಳಬೇಕು ಎಂದು ಕಾತರದಿಂದ ಕಾಯುತ್ತಿದ್ದ ಭಾರತದ ಫುಟ್ಬಾಲ್ ಅಭಿಮಾನಿಗಳಿಗೆ ಇದೀಗ ನಿರಾಸೆಯಾಗಿದೆ. ಹೀಗಾಗಿ ಗೋವಾ ವಿರುದ್ಧದ ಪಂದ್ಯ ಕೇವಲ ಔಪಚಾರಿಕ ಪಂದ್ಯವೆನಿಸಿದೆ.

coorg buzz
coorg buzz