ಅರಣ್ಯ ಸಚಿವರು ನಿಮ್ಹಾನ್ಸ್‌ನಿಂದ ತಪ್ಪಿಸಿಕೊಂಡು ಬಂದಿದ್ದಾರಾ ? – ಮಾಜಿ ಸಚಿವ ಅಪ್ಪಚ್ಚು ರಂಜನ್‌ ಆಕ್ರೋಶ..!

Share this post :

ಸಿದ್ದಾಪುರ : ಅರಣ್ಯ ಸಚಿವರು ಒತ್ತುವರಿ ವಿಚಾರದಲ್ಲಿ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದು, ಅವರು ನಿಮ್ಹಾನ್ಸ್‌ನಿಂದ ತಪ್ಪಿಸಿಕೊಂಡು ಬಂದಿದ್ದಾರಾ ಎಂಬ ಸಂಶಯ ವ್ಯಕ್ತವಾಗುತ್ತಿದೆ ಎಂದು ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೆಲ್ಯಹುದಿಕೇರಿಯಲ್ಲಿ ಮಾತನಾಡಿದ ಅವರು, ಅರಣ್ಯ ಸಚಿವರು ಇತ್ತೀಚೆಗೆ ನೂತನ ಆದೇಶ ನೀಡಿರುವ ಪ್ರಕಾರ 1980 ರಿಂದ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ವಾಸವಿರುವವರು ಕೂಡಲೇ ಅರಣ್ಯ ಇಲಾಖೆಗೆ ಹಿಂತಿರುಗಿಸಬೇಕು. ಇಲ್ಲವಾದಲ್ಲಿ ದಂಡ ವಿಧಿಸಲಾಗುವುದು ಹೇಳಿದ್ದಾರೆ. ಇದು ಬಡವರನ್ನು ಸಂಕಷ್ಟಕ್ಕೆ ಸಿಲುಕಿಸುವ ಪ್ರಯತ್ನವಾಗಿದೆ. ಬಡವರ ವಿರುದ್ದ ಅಧಿಕಾರ ದುರ್ಬಳಕೆ ಮಾಡುತ್ತಿರುವ ಸರ್ಕಾರವನ್ನು ಕಿತ್ತೊಗೆಯಬೇಕೆಂದು ಹೇಳಿದರು.

 

ವಿಡಿಯೋ ನೋಡಿ

 

#appacchuranjan #eshwarkhandre #forest

coorg buzz
coorg buzz