ನಾಲ್ವರ ಹ*ತ್ಯೆಗೈದ ಅಪರಾಧಿಗೆ ಗಲ್ಲು ಶಿಕ್ಷೆ – ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕದ ಗೌರವ..!

Share this post :

ಮಡಿಕೇರಿ : ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ನಾಲ್ವರ ಹ*ತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು. ಈ ಪ್ರಕರಣದ ತನಿಖೆಯಲ್ಲಿ ಅತ್ಯುತ್ತಮ ಕಾರ್ಯನಿರ್ವಹಣೆ ತೋರಿದ ಅಧಿಕಾರಿ ಮತ್ತು ಸಿಬ್ಬಂದಿಗೆ ಬೆಳ್ಳಿ ಪದಕ ನೀಡಿ ಗೌರವಿಸಲಾಗಿದೆ.
ಪೊಲೀಸ್‌ ಪರೇಡ್‌ ಮೈದಾನದಲ್ಲಿ ನಡೆದ ಕವಾಯತು ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್ಪಿ ಕೆ. ರಾಮರಾಜನ್‌ ಅವರು ಬೆಳ್ಳಿ ಪದಕವಿರುವ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಿದರು.

coorg buzz
coorg buzz