ಸಮರ್ಥ ಸಾಹಿತ್ಯ ಪ್ರತಿಷ್ಟಾನದ ಪತ್ರಿಕೋದ್ಯಮ ಪ್ರಶಸ್ತಿಗೆ ಅನಿಲ್ ಹೆಚ್.ಟಿ. ಆಯ್ಕೆ

Share this post :

ಮಡಿಕೇರಿ : ಬೆಂಗಳೂರಿನ ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೖತಿಕ ಪ್ರತಿಷ್ಠಾನವು ನೀಡುವ ವಾರ್ಷಿಕ ಪ್ರಶಸ್ತಿಗೆ ಪತ್ರಿಕೋದ್ಯಮ ಕ್ಷೇತ್ರದಿಂದ ಮಡಿಕೇರಿಯ ಅನಿಲ್ ಹೆಚ್.ಟಿ. ಆಯ್ಕೆಯಾಗಿದ್ದಾರೆ.

ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೖತಿಕ ಪ್ರತಿಷ್ಟಾನವು ವಾರ್ಷಿಕವಾಗಿ ಪತ್ರಿಕೋದ್ಯಮ, ಸಮಾಜಸೇವೆ, ಆರೋಗ್ಯ, ಶಿಕ್ಷಣ, ಸಾಹಿತ್ಯ, ಉದ್ಯಮ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಗುರುತಿಸಿ ಗಾಂಧಿ ಪ್ರಿಯ ಹೆಸರಿನ ಪ್ರಶಸ್ತಿ ನೀಡುತ್ತಿದೆ. ಈ ವರ್ಷದ ಗಾಂಧಿ ಪ್ರಿಯ ಪ್ರಶಸ್ತಿಗೆ ಪತ್ರಿಕೋದ್ಯಮ ಕ್ಷೇತ್ರದಿಂದ ಅನಿಲ್ ಹೆಚ್.ಟಿ. ಆಯ್ಕೆಯಾಗಿದ್ದಾರೆ. ಪತ್ರಿಕೋದ್ಯಮ, ವಿದ್ಯುನ್ಮಾನ, ಬಾನುಲಿ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಸೇವೆಗಳಲ್ಲಿ ಅನಿಲ್ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಪ್ರತಿಷ್ಟಾನದ ಅಧ್ಯಕ್ಷ ಎಸ್.ಆರ್. ವಿಜಯ ಸಮರ್ಥ ತಿಳಿಸಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭ ಡಿ. 28 ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಚಾಮರಾಜಪೇಟೆಯ ಕುವೆಂಪು ಸಭಾಂಗಣದಲ್ಲಿ ಆಯೋಜಿತವಾಗಿದ್ದು, ವಿಶ್ರಾಂತ ನ್ಯಾಯಮೂರ್ತಿ ಪಾಲಾಕ್ಷಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

coorg buzz
coorg buzz