ಕೊಡಗಿನ ಜಮ್ಮಾಬಾಣೆ ಸಮಸ್ಯೆ ನಿವಾರಣೆಗೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಅಂಗೀಕಾರ ಮಾಡಿರುವ ಕರ್ನಾಟಕ ಭೂಕಂದಾಯ ತಿದ್ದುಪಡಿ ಮಸೂದೆ-2025ರ ಕುರಿತಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ವಿವರಣೆ ನೀಡಲು ಪತ್ರಿಕಾಗೋಷ್ಠಿ ನಡೆಸಿದರು. ಜನರ ಸಮಸ್ಯೆ ಬಗೆಹರಿಸಲು ತಾವು ಕೈಗೊಂಡ ಹಲವಾರು ನಡೆಗಳ ಬಗ್ಗೆ ವಿವರಿಸುತ್ತಾ, ಇದರಿಂದ ಕೊಡಗಿನ ಜನತೆಗೆ ಆಗುವ ಅನುಕೂಲಗಳ ಬಗ್ಗೆ ಮಾಹಿತಿ ನೀಡಿದರು.
ಜಮ್ಮ ಬಾಣೆ ಸಮಸ್ಯೆ ನಿವಾರಿಸುವಲ್ಲಿ ತಾವು ಕೈಗೊಂಡ ಶ್ರಮದ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಶ್ಲಾಘಸಿದರೂ ಸಹ, ನಮ್ಮದೇ ಕೊಡಗಿನ ಬಿಜೆಪಿ ಮಾಜಿ ಶಾಸಕರುಗಳು ಅಪಸ್ವರ ಎತ್ತಿ ಪತ್ರಿಕಾಗೋಷ್ಠಿ ನಡೆಸಿದ್ದಕ್ಕೆ ಬೇಸರ ವ್ಯಕ್ತಪಡಿಸಿದರು. ಅಂದಿನ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಶಾಸಕರು ಹೇಳಿದ ಸುಳ್ಳುಗಳನ್ನು ದಾಖಲೆ ಸಮೇತ ಬಹಿರಂಗ ಪಡಿಸಿದ ಪೊನ್ನಣ್ಣ ರವರು, ಇನ್ನಾದರೂ ಬಿಜೆಪಿ ಮಾಜಿ ಶಾಸಕರುಗಳು ರಾಜಕೀಯ ನೈತಿಕತೆ ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮಡಿಕೇರಿ ಶಾಸಕರಾದ ಮಂತರ್ ಗೌಡ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರು ಅರುಣ್ ಮಾಚಯ್ಯ, ಮಾಜಿ ವಿಧಾನ ಪರಿಷತ್ ಸದಸ್ಯೆ ಶ್ರೀಮತಿ ವೀಣಾ ಅಚ್ಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಧರ್ಮಜ ಉತ್ತಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಚಂದ್ರಮೌಳಿ, ಡಿಸಿಸಿ ಉಪಾಧ್ಯಕ್ಷರು ಅಬ್ದುಲ್ ರೆಹಮನ್, ಕೆ ಎಂ ಲೋಕೇಶ್, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.



