ಇತ್ತೀಚೆಗೆ ಉತ್ತರ ಪ್ರದೇಶದ ಬರೇಲಿಯ ಉಡಾನ್ ಗ್ಲೋಬಲ್ ಶಾಲೆಯಲ್ಲಿ ನಡೆದ 7ನೇ ವರ್ಷದ ಸೆಸ್ಟೊಬಾಲ್ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ರಾಜ್ಯ ತಂಡವು ಅಮೋಘ ಪ್ರದರ್ಶನ ನೀಡಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಈ ತಂಡದಲ್ಲಿ ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣದ ಪ್ರತಿಭಾನ್ವಿತ ಕ್ರೀಡಾಪಟು ನಂದಿನಿ ಅವರು ಕರ್ನಾಟಕವನ್ನು ಪ್ರತಿನಿಧಿಸಿ ತಂಡದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಕುಶಾಲನಗರದ ತರಬೇತುದಾರರಾದ ಜಾನ್ಸನ್ ಮತ್ತು ಕಾರ್ತಿಕ್ ಅವರ ಮಾರ್ಗದರ್ಶನದಲ್ಲಿ ಕಠಿಣ ತರಬೇತಿ ಪಡೆದಿದ್ದ ಕರ್ನಾಟಕ ತಂಡವು, ರಾಷ್ಟ್ರಮಟ್ಟದಲ್ಲಿ ಎದುರಾಳಿಗಳನ್ನು ಮಣಿಸಿ ರನ್ನರ್-ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ಕೊಡಗಿನ ಪುತ್ರಿಗೆ ಮತ್ತು ತಂಡದ ಸಾಧನೆಗೆ ಕ್ರೀಡಾಭಿಮಾನಿಗಳು ಹಾಗೂ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.



