ಮಡಿಕೇರಿ : ಕಡಗದಾಳು ಕ್ಲಸ್ಟರ್ ಮಟ್ಟದ FLN ಕಲಿಕಾ ಹಬ್ಬ ಕ್ಲೋಸ್‌ಬರ್ನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಕೆ. ನಾರಾಯಣ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮವನ್ನು ಸಿಆರ್‌ಪಿ ನಿಶಾ ಹಾಗೂ ಶಾಲೆ ಮುಖ್ಯಶಿಕ್ಷಕಿ ಎಂ.ಟಿ. ಲಕ್ಷ್ಮೀ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಪಠ್ಯಕ್ಕೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳು ನಡೆದವು. ಮರಗೋಡು, ಅರೆಕಾಡು, ಬೋಯಿಕೇರಿ, ಕಟ್ಟೆಮಾಡು, ಕಡಗದಾಳು ಶಾಲೆಯ ವಿದ್ಯಾರ್ಥಿಗಳು ಸ್ಪರ್ಧಾ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದರು. ವಿಜೇತರಿಗೆ ಅತಿಥಿಗಳು ಬಹುಮಾನ ವಿತರಿಸಿದರು. ಶಿಕ್ಷಕಿ ಜೆಸ್ಸಿ ಸ್ವಾಗತಿಸಿದರು. ಶ್ರೀಮತಿ ಉಷಾ ನಿರೂಪಿಸಿದರು. ಶಿಕ್ಷಕಿ ಪ್ರಜ್ಞಾ, ಎಸ್‌ಡಿಎಂಸಿ ಉಪಾಧ್ಯಕ್ಷೆ ಜಯಶ್ರೀ, ಸದಸ್ಯರು, ಪೋಷಕರು ಉಪಸ್ಥಿತರಿದ್ದರು.



