ವಿರಾಜಪೇಟೆ: ಶಿಕ್ಷಣ, ಸಾಹಿತ್ಯ ಕ್ಷೇತ್ರದಲ್ಲಿನ ಸೇವೆಯನ್ನು ಪರಿಗಣಿಸಿ ಪ್ರಾಧ್ಯಾಪಕ ಪ್ರೊ. ಬಸವರಾಜು ಕೆ ರವರಿಗೆ ಕನ್ನಡ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಡಾ. ಜೀಶಂಪ ಸಾಹಿತ್ಯ ವೇದಿಕೆ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಫಿಲಂಸ್ ಕನ್ನಂಬಾಡಿ ದಿನಪತ್ರಿಕೆ ಮಂಡ್ಯ ಇವರ ಸಂಯುಕ್ತ ಆಶ್ರಯದಲ್ಲಿ ಸಂಕ್ರಾಂತಿ ಅಂಗವಾಗಿ ಸುಗ್ಗಿ ಸಂಭ್ರಮ ದ ಪ್ರಯುಕ್ತ 15 ನೇ ಅಖಿಲ ಕರ್ನಾಟಕ ಕನ್ನಡ ಅಕ್ಷರ ಜಾತ್ರೆ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭವು ಇತ್ತೀಚೆಗೆ ಮಂಡ್ಯದ ಕೆ. ವಿ. ಶಂಕರಗೌಡ ಶತಮಾನೋತ್ಸವ ಭವನ ಕರ್ನಾಟಕ ಸಂಘದಲ್ಲಿ ನಡೆಯಿತು.
ಈ ಸಮಾರಂಭದಲ್ಲಿ ಗಣ್ಯರು ಪ್ರಶಸ್ತಿಯನ್ನು ಪ್ರೊ.ಬಸವರಾಜು ರವರಿಗೆ ಪ್ರಧಾನ ಮಾಡಿ ಗೌರವಿಸಿದರು.ಮೂಲತ ಹುಣಸೂರಿನವರಾದ ಪ್ರೊ. ಬಸವರಾಜು ರವರು ಪ್ರಸ್ತುತ ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.



