ನಗರದ ಸ್ಟೀವರ್ಟ್ ಹಿಲ್ ಬಳಿ ಇರುವ ಕುಡಿಯುವ ನೀರು ಶುದ್ದೀಕರಣ ಘಟಕಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು. ಶುದ್ದ ಕುಡಿಯುವ ನೀರು ಶುದ್ದೀಕರಣ ಪ್ರಕ್ರಿಯೆ ಸಂಬಂಧಿಸಿದಂತೆ ಮಾಹಿತಿ ಪಡೆದರು. ಕುಡಿಯುವ ನೀರಿನ ಗುಣಮಟ್ಟ ಪರಿಶೀಲಿಸಿದರು. ಕುಡಿಯುವ ನೀರು ಸಂಬಂಧಿಸಿದಂತೆ ಅಮೃತ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಯನ್ನು ಪರಿಶೀಲಿಸಿದರು.
ಹಾಗೆಯೇ ಸ್ಟೀವರ್ಟ್ ಹಿಲ್ ಬಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಜಾಗ ಸಂಬಂಧಿಸಿದಂತೆ ಆದಷ್ಟು ಬೇಗ ನಗರಸಭೆ ವ್ಯಾಪ್ತಿಗೆ ಪಡೆಯುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಎಂಜಿನಿಯರ್‍ಗಳಾದ ಸತೀಶ್, ಪ್ರಸನ್ನ ಇತರರು ಕುಡಿಯುವ ನೀರು ಶುದ್ಧಿಕರಣ ಘಟಕದಲ್ಲಿನ ಕಾರ್ಯಚಟುವಟಿಕೆ ಹಾಗೂ ಕಸ ವಿಲೇವಾರಿ ಬಗ್ಗೆ ಮಾಹಿತಿ ನೀಡಿದರು.



