ಕ್ಲೋಸ್‌ಬರ್ನ್‌ ಸಹಿಪ್ರಾ ಶಾಲೆಯಲ್ಲಿ ಸಂಭ್ರಮದ ವಾರ್ಷಿಕೋತ್ಸವ

Share this post :

ಮಡಿಕೇರಿ : ಕ್ಲೋಸ್‌ಬರ್ನ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಹಾಗೂ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು.
ಕಡಗದಾಳು ಗ್ರಾಮ ಪಂಚಾಯಿತಿ ಸದಸ್ಯೆ ಬಿ.ಎನ್. ಪುಷ್ಪಾವತಿ‌ ರೈ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಭಾ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಕಾರ್ಯಕ್ರಮಗಳು ನೆರವೇರಿತು. ಎಸ್‌ಡಿಎಂಸಿ ಅಧ್ಯಕ್ಷ ಬಿ.ಕೆ. ನಾರಾಯಣ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕಿ ಎಂ.ಟಿ. ಲಕ್ಷ್ಮೀ ದಿನದ ಮಹತ್ವದ ಕುರಿತಾಗಿ ಮಾತನಾಡಿದರು. ವಾರ್ಷಿಕೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳು, ಅಂಗನವಾಡಿ ಪುಟಾಣಿಗಳು, ಸಾರ್ವಜನಿಕರು, ಶೈಕ್ಷಣಿಕವಾಗಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಜೆಸ್ಸಿ ಕೆ.ಎಫ್. ಸ್ವಾಗತಿಸಿದರು. ಪಿ.ಸಿ. ಉಷಾ ನಿರೂಪಿಸಿದರು. ಪ್ರಜ್ಞಾ ವಂದಿಸಿದರು. ಗ್ರಾಪಂ ಸದಸ್ಯೆ ಪ್ರಭಾ, ಎಸ್‌ಡಿಎಂಸಿ ಉಪಾಧ್ಯಕ್ಷೆ ಜಯಶ್ರೀ, ಪೋಷಕರು, ಹಳೆ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

coorg buzz
coorg buzz