ಕೇರಳ ರಾಜ್ಯದ ಹೆಸರು ಬದಲಾವಣೆಗೆ ಕೇಂದ್ರ ಸಂಪುಟದ ಅನುಮೋದನೆ: ಹೊಸ ಹೆಸರೇನು?

Kerala name

Share this post :

ಭಾರತದ ಸುಂದರ ರಾಜ್ಯ, ದೇವರ ಸ್ವಂತ ನಾಡು ಎಂದೇ ಖ್ಯಾತಿಯಾಗಿರುವ ಕೇರಳದ ಹೆಸರು ಬದಲಾವಣೆಗೆ ಹಸಿರು ನಿಶಾನೆ ತೋರಿತಿದೆ. ಕೇರಳ ಸರ್ಕಾರದ ದೀರ್ಘಕಾಲದ ಬೇಡಿಕೆಯಂತೆ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮಂಗಳವಾರ (ಫೆಬ್ರವರಿ 24) ಅನುಮೋದನೆ ನೀಡಿದೆ. ಮಲಯಾಳಂ ಭಾಷೆಯಲ್ಲಿ ರಾಜ್ಯವನ್ನು ‘ಕೇರಳಂ’ ಎಂದೇ ಕರೆಯಲಾಗುತ್ತಿದ್ದು, ಇದೇ ಹೆಸರನ್ನು ಸಂವಿಧಾನದ ಎಂಟನೇ ಅನುಸೂಚಿಯ ಎಲ್ಲಾ ಭಾಷೆಗಳಲ್ಲಿ ಅಳವಡಿಸಲು 2023 ಮತ್ತು 2024ರಲ್ಲಿ ಕೇರಳ ವಿಧಾನಸಭೆಯು ಒಮ್ಮತದ ನಿರ್ಣಯ ಅಂಗೀಕರಿಸಿತ್ತು.

ಕೇರಳದಲ್ಲಿ ಈ ವರ್ಷದ ಏಪ್ರಿಲ್-ಮೇ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರ ಈ ಮಹತ್ವದ ಘೋಷಣೆ ಮಾಡಿರುವುದು ರಾಜಕೀಯವಾಗಿಯೂ ಕುತೂಹಲ ಮೂಡಿಸಿದೆ.ಬ್ರಿಟಿಷರ ಕಾಲದ ಹೆಸರನ್ನು ಕೈಬಿಟ್ಟು, ಮಲಯಾಳಂ ಸಂಸ್ಕೃತಿ ಮತ್ತು ಇತಿಹಾಸಕ್ಕೆ ಪೂರಕವಾದ ಹೆಸರನ್ನು ಅಧಿಕೃತಗೊಳಿಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಭಾರತದ ಸುಂದರ ಕರಾವಳಿ ರಾಜ್ಯ, ‘ದೇವರ ಸ್ವಂತ ನಾಡು’ ಎಂದೇ ಪ್ರಸಿದ್ಧವಾಗಿರುವ ಕೇರಳದ ಹೆಸರನ್ನು ಬದಲಾಯಿಸುವ ಪ್ರಕ್ರಿಯೆಗೆ ಈಗ ಅಧಿಕೃತ ಮುದ್ರೆ ಬಿದ್ದಿದೆ. ಕೇರಳ ಸರ್ಕಾರದ ದೀರ್ಘಕಾಲದ ಮನವಿಯನ್ನು ಪುರಸ್ಕರಿಸಿದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು, ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಮರುನಾಮಕರಣ ಮಾಡಲು ಮಂಗಳವಾರ (ಫೆಬ್ರವರಿ 24) ಹಸಿರು ನಿಶಾನೆ ತೋರಿದೆ.

ಬದಲಾವಣೆಯ ಹಿನ್ನೆಲೆ ಮತ್ತು ಉದ್ದೇಶ:ಮಲಯಾಳಂ ಭಾಷೆಯಲ್ಲಿ ರಾಜ್ಯವನ್ನು ಮೊದಲಿನಿಂದಲೂ ‘ಕೇರಳಂ’ ಎಂದೇ ಕರೆಯಲಾಗುತ್ತಿದೆ. ಬ್ರಿಟಿಷರ ಕಾಲದ ಪ್ರಭಾವವಿರುವ ‘ಕೇರಳ’ ಹೆಸರಿನ ಬದಲು, ಸ್ಥಳೀಯ ಸಂಸ್ಕೃತಿ ಮತ್ತು ಇತಿಹಾಸವನ್ನು ಪ್ರತಿಬಿಂಬಿಸುವ ಹೆಸರನ್ನೇ ಉಳಿಸಿಕೊಳ್ಳುವುದು ಇದರ ಮುಖ್ಯ ಉದ್ದೇಶ.

coorg buzz
coorg buzz