ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 06) ಕರ್ನಾಟಕದ 2026-27ನೇ ಸಾಲಿನ ವಾರ್ಷಿಕ ಬಜೆಟ್ ಮಂಡಿಸಿದ್ದಾರೆ. ಒಟ್ಟು 4 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ನಲ್ಲಿ ವಲಯವಾರು ವಿಂಗಡಣೆ ಮಾಡಿದ್ದಾರೆ. ಹಾಗಾದ್ರೆ, ಈ ಬಾರಿಯ ಬಜೆಟ್ನಲ್ಲಿ ಪ್ರಮುಖ ಮುಖ್ಯಾಂಶ ಇಲ್ಲಿದೆ.
* ವಿವಿಗಳಲ್ಲಿ ಜಾತಿ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ’ ಕಾಯ್ದೆ ಜಾರಿ.
* ಕುವೆಂಪು ವಿವಿಯಲ್ಲಿ U.R.ಅನಂತಮೂರ್ತಿ ಅಧ್ಯಯನಪೀಠ ಸ್ಥಾಪನೆ.
* ವಿಕ್ಟೋರಿಯಾ ಆಸ್ಪತ್ರೆಗೆ ಶಾಂತವೇರಿ ಗೋಪಾಲಗೌಡ ಎಂದು ಮರುನಾಮಕರಣ.
* ಕರ್ನಾಟಕದ ಸಮಗ್ರ ಅಭಿವೃದ್ಧಿಗೆ 11G ಮಾದರಿ ಆರ್ಥಿಕತೆ ಘೋಷಣೆ.
* ಪ್ರಸಕ್ತ ವರ್ಷದಲ್ಲಿ 56,432 ಉದ್ಯೋಗ ನೇಮಕಾತಿ.
* ರಾಜ್ಯದ ಗ್ರಾಮ ಪಂಚಾಯ್ತಿಗಳಿಗೆ ಮಹಾತ್ಮಾ ಗಾಂಧಿ ಹೆಸರು.
* ಅನ್ನಭಾಗ್ಯ: 5 ಕೆಜಿ ಅಕ್ಕಿ ಜೊತೆ ಇಂದಿರಾ ಕಿಟ್ ವಿತರಣೆ.
* ಇಂದಿರಾ ಕಿಟ್: ತೊಗರಿಬೇಳೆ, ಅಡುಗೆ ಎಣ್ಣೆ, ಸಕ್ಕರೆ, ಹೆಸರು ಕಾಳು, ಉಪ್ಪು ಒಳಗೊಂಡಿರುತ್ತದೆ.
* 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್.
* 800 ಕರ್ನಾಟಕ ಪಬ್ಲಿಕ್ ಸ್ಕೂಲ್ ಹಾಗೂ ಹೊಸ ಸರ್ಕಾರಿ ಶಾಲೆಗಳ ಆರಂಭ.
* ಎಲ್ಲಾ ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ಪುನರಾರಂಭ.
* ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ಎಲ್ಲಾ ಜಿಲ್ಲೆಗಳಲ್ಲಿ ‘ಅಕ್ಕ ಪಡೆ’ ಆರಂಭ.
* ಬೆಂಗಳೂರು ಮತ್ತು ಧಾರವಾಡದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಸ್ಥಾಪನೆ.
* 4.90 ಲಕ್ಷ ಮನೆ ನಿರ್ಮಾಣ ಕಾರ್ಯ ಪೂರ್ಣಗೊಳಿಸಲು ನಿರ್ಧಾರ.
* ಮೈಸೂರನ್ನು ಎರಡನೇ ಐಟಿ ರಾಜಧಾನಿಯಾಗಿ ಬೆಳೆಸಲು ಉತ್ತೇಜನ.
* 38 ಲಕ್ಷ ರೈತರಿಗೆ ಸಾಲ ನೀಡಲು ₹30,000 ಕೋಟಿ ಮೀಸಲು.
* ಕೃಷ್ಣಾ ಮೇಲ್ದಂಡೆ ಯೋಜನೆಯ ಭೂ ಸ್ವಾಧೀನ ಪ್ರಕ್ರಿಯೆ ಆರಂಭ.
* ಬೆಂಗಳೂರು ಮತ್ತು ಬೀದರ್ನಲ್ಲಿ ಶ್ವಾನ ಸಂತಾನ ನಿಯಂತ್ರಣ ತರಬೇತಿ ಕೇಂದ್ರ.
* ಪಶುಗಳ ರೋಗ ಪತ್ತೆಗಾಗಿ ಸಿಟಿ ಸ್ಕ್ಯಾನಿಂಗ್ ಕೇಂದ್ರ ಸ್ಥಾಪನೆ.
* 100 ಕೋಟಿ ರೂಪಾಯಿ ವೆಚ್ಚದಲ್ಲಿ ಕೃಷಿ ವಿಸ್ತಾರ ಯೋಜನೆ.
* ಕೃಷಿ ವೆಚ್ಚ ಕಡಿತಕ್ಕೆ ಹೈಟೆಕ್ ಹಾರ್ವೆಸ್ಟರ್ ಹಬ್ ಮತ್ತು ಕೋಲಾರದಲ್ಲಿ ರೈತ ಮಾಲ್.
* ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಭಾಗ್ಯ.
* ಬಾಣಂತಿಯರಿಗೆ ಬಿಸಿಯೂಟ ಮತ್ತು ಮರಣ ಪ್ರಮಾಣ ತಗ್ಗಿಸಲು ಕ್ರಮ.
* ಮಧುಮೇಹದಿಂದ ಬಳಲುತ್ತಿರುವ ಮಕ್ಕಳಿಗೆ ಉಚಿತ ಇನ್ಸುಲಿನ್.
* ಕಲ್ಯಾಣ ಕರ್ನಾಟಕದಲ್ಲಿ ₹1,000 ಕೋಟಿ ವೆಚ್ಚದಲ್ಲಿ 1,124 ಕಿ.ಮೀ ಕಲ್ಯಾಣ ಪಥ.
* ರಾಜ್ಯಾದ್ಯಂತ 1,250 ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಪಾಯಿಂಟ್ ಸ್ಥಾಪನೆ.
* ಬೆಂಗಳೂರು ಅಭಿವೃದ್ಧಿಗೆ ಒಟ್ಟು ₹7,000 ಕೋಟಿ ಮೀಸಲು.
* ಬೆಂಗಳೂರಿನಲ್ಲಿ 40 ಕಿ.ಮೀ ಸುರಂಗ ಮಾರ್ಗ ನಿರ್ಮಾಣ.
* ಬೆಂಗಳೂರಿನ ಟ್ರಾಫಿಕ್ ಜಾಮ್ ಕಡಿಮೆ ಮಾಡಲು ಹಲವು ವಿಶೇಷ ಯೋಜನೆಗಳು.
* ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಚಾಲನೆ.



